ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆ ಡಿಎಸ್ ಪಕ್ಷದಿಂದ ಅಮಾನತು ಮಾಡಲು ತೀರ್ಮಾನಿಸಲಾಗಿದೆ.. ಪಕ್ಷದ ಉನ್ನತ ಮಟ್ಟದ ಸಮಿತಿ ಇಂದು ಈ ನಿರ್ಧಾರ ಕೈಗೊಂಡಿದೆ.

ಆದರೆ ಈ ಅಮಾನತು ತೀರ್ಮಾನವನ್ನು ಪಕ್ಷದ ರಾಷ್ಟ್ರ‍ೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಅನುಷ್ಟಾನ ಗೊಳಿಸಬೇಕು. ತಮ್ಮ ಪ್ರೀತಿಯ ಮೊಮ್ಮಗನ ವಿರುದ್ಧ ಕ್ರಮ ಕೈಗೊಳ್ಳುವುದು ಅವರಿಗೆ ಕಷ್ಟದ ಕೆಲಸವೇ.
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ , ವಿಡಿಯೋಗಳು ಹಾಗೂ ಪೆನ್ ಡ್ರೈವ್ ಬಗ್ಗೆ ಈಗಾಗಲೇ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಇಂದು ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಿತು.

ಹುಬ್ಬಳ್ಳಿಯಲ್ಲಿ ನಡೆದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಸೇರಿದಂತೆ ಆಲ್ಕೋಡ್ ಹನುಮಂತಪ್ಪ, ಬಂಡೆಪ್ಪ ಕಾಶೆಂಪೂರ್, ಸಿ.ಎಸ್.ಪುಟ್ಟರಾಜು, ವೆಂಕಟ್‌ರಾವ್ ನಾಡಗೌಡ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪಾಲ್ಗೊಂಡಿದ್ದರು.

Author

Leave a Reply

Your email address will not be published. Required fields are marked *