ಮಹಿಳೆಯರ ಮೇಲೆ ಅತ್ಯಾಚಾರ ಎಸಗುವವರ ಜೊತೆ ನಾವು ಇರುವುದಿಲ್ಲ ಎಂದ ಅಮಿತ್ ಶಾ.ಹಾಗಿದ್ದರೆ ಜೆದಿಎಸ್ ಜೊತೆಗಿನ ಮೈತ್ರಿ ?

ಹಿಳೆಯರ ಮೇಲೆ ಅತ್ಯಾಚಾರ ಎಸಗುವವರ ಜೊತೆ ನಾವು ಇರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.
ನಾವು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಮೇಲೆ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಹೊರಗೆ ಬಂತು ಎಂದು ಹೇಳುವ ಮೂಲಕ ಒಂದೊಮ್ಮೆ ಮೊದಲೇ ಹೊರಬಂದಿದ್ದರೆ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿರಲಿಲ್ಲ ಎಂದು ಅಪ್ರತ್ಯಕ್ಷವಾಗಿ ಹೇಳಿದರು.
ಭಾರತೀಯ ಜನತಾ ಪಕ್ಷ ಎಂದಿಗೂ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಸಹಿಸುವುದಿಲ್ಲ.. ಜೆಡಿಎಸ್ ಜೊತೆಗಿನ ಮೈತ್ರಿ ಬಳಿಕ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಬಯಲಾಗಿದ್ದು, ಕಾಂಗ್ರೆಸ್ ಗೆ ಹಗರಣದ ಬಗ್ಗೆ ಮೊದಲೇ ತಿಳಿದಿತ್ತು.. ‘ಒಕ್ಕಲಿಗ ಬೆಲ್ಟ್’ ಮತದಾನದ ಬಳಿಕ ವಿಡಿಯೋ ಬಿಡುಗಡೆ ಮಾಡಿದೆ ಎಂದು ಅಮಿತ್ ಶಾ ಹೇಳಿದರು

ಲೋಕಸಭಾ ಚುನಾವಣೆ 2024ರ ನಿಮಿತ್ತ ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ,’ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ವಿಚಾರವಾಗಿ ಕಾಂಗ್ರೆಸ್ ಪಕ್ಷ ಇಲ್ಲ-ಸಲ್ಲದ ಆರೋಪಗಳನ್ನು ಮಾಡುತ್ತಿದೆ.

ನಾನು ಈ ಮೂಲಕ ಜನತೆಗೆ ಸ್ಪಷ್ಟಪಡಿಸುವುದೇನೆಂದರೆ. ಭಾರತೀಯ ಜನತಾ ಪಕ್ಷ ಎಂದಿಗೂ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಸಹಿಸುವುದಿಲ್ಲ.. ಬಿಜೆಪಿ ಎಂದಿಗೂ ಮಹಿಳೆಯರ ಮೇಲಿನ ದೌರ್ಜನ್ಯದ ಆರೋಪಿಗಳ ಜೊತೆಗೆ ನಿಲ್ಲುವುದಿಲ್ಲ.ಎಂದು ಅವರು ಭರವಸೆ ನೀಡಿದರು.

Author

Leave a Reply

Your email address will not be published. Required fields are marked *