ಲೈಂಗಿಕ ದೌರ್ಜನ್ಯದ ಆರೋಪ ಹೊತ್ತು ದೇಶಾದ್ಯಂತ ಕುಖ್ಯಾತಿ ಪಡೆದಿರುವ ಸಂಸದ ಪ್ರಜ್ವಲ್ ರೇವಣ್ಣ ಮೇ ೩ ರಂದು ರಾತ್ರಿ ಬೆಂಗಳೂರು ತಲುಪುವ ಸಾಧ್ಯತೆ ಇದೆ. ಮೇ ಮೂರರಂದು ವಾಪಸ್ ಅಗುವ ಅವರು ಮೇ ೪ ರಂದು ಎಸ್ ಐ ಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ತಮ್ಮ ವಿರುದ್ಧದ ಲೈಂಗಿಕ ಕಿರುಕುಳದ ವಿಡಿಯೋಗಳು ಬಹಿರಂಗವಾಗುತ್ತಲೇ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದರು. ಹಾಗೆ ಹೋಗುವಾಗಲೇ ರಿಟರ್ನ್ ಟಿಕೆಟ್ ಬುಕ್ ಮಾಡಿದ್ದಾರೆಂದು ಕೆಲವು ಮೂಲಗಳು ತಿಳಿಸಿವೆ. ರಿಟರ್ನ್ ಟಿಕೆಟ್ ಬುಕಿಂಗ್ ಮಾಹಿತಿಯ ಪ್ರಕಾರ, ಅವರು ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಬೆಂಗಳೂರಿಗೆ ಮೇ 3ರಂದು ಪ್ರಯಾಣ ಬೆಳೆಸಲಿದ್ದಾರೆ.
:
ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ಅವರು, ಪ್ರಸ್ತುತ ಜರ್ಮನಿಯಲ್ಲಿದ್ದು, ಮೇ 3ರಂದು ಅವರು ಬೆಂಗಳೂರಿಗೆ ವಾಪಸ್ ಬರಲಿದ್ದಾರೆ ಎಂದು ಕೆಲವು ಮೂಲಗಳು ಉಲ್ಲೇಖ ಮಾಡಿವೆ.
ಏ. 26ರಂದು ಹಾಸನದಲ್ಲಿ ಮತ ಚಲಾಯಿಸಿದ್ದ ಅವರು, ಆನಂತರ ಎಲ್ಲೂ ಕಾಣಿಸಿಕೊಂಡಿರಲಿಲ್ಲ.

Author

Leave a Reply

Your email address will not be published. Required fields are marked *