ಸಿದ್ದರಾಮಯ್ಯ

ಮೈಸೂರು : ನಮ್ಮದು ನುಡಿದಂತೆ ನಡೆದ ಸರ್ಕಾರ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ೨೦ ಕ್ಷೇತ್ರಗಳಲ್ಲಿ ನಮ್ಮ ಗೆಲುವು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಅಥವಾ ನಾಳೆ ಬಾಕಿ ಉಳಿದಿರುವ ಕಾಂಗ್ರೆಸ್ ಪಟ್ಟಿಗಳನ್ನು ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಕಗ್ಗಂಟಾಗುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮೈಸೂರಿಗೆ ಭೇಟಿ ನೀಡಿರುವ ಅವರು ಮಂಡಕ್ಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಲ್ಲ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ. ಆದ್ದರಿಂದ ಲೋಕಸಭಾ ಚುಣಾವಣೆಯಲ್ಲೂ ನಾಡಿನ ಜನತೆ ಕಾಂಗ್ರೆಸ್ ಪಕ್ಷ ಕ್ಕೆ ಆರ್ಶೀವಾದ ಮಾಡುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮತದಾರರು ಯಾರನ್ನು ಗೆಲ್ಲಿಸುತ್ತಾರೋ ಅವರಿಗೆ ಟಿಕೆಟ್ ನೀಡಲಾಗಿದೆ. ಕುಟುಂಬ ರಾಜಕಾರಣ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

Author

Leave a Reply

Your email address will not be published. Required fields are marked *