ಬೆಂಗಳೂರು : ಟಿಕೆಟ್ ಹಂಚಿಕೆಯ ಸಮಸ್ಯೆಯ ನಡುವೆಯೇ ಜೆಡಿಎಸ್ ನಾಯಕ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಪಕ್ಷದ ಕಾರ್ಯಕರ್ತರ ಒತ್ತಡ, ಪ್ರಸಕ್ತ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಮಾರಸ್ಚಾಮಿ ತಾವೇ ಕಣಕ್ಕೆ ಇಳಿಯುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಮಂಡ್ಯ ಮತ್ತು ಹಾಸನ ಎರಡು ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಹೇಳಿಕೆ ಹೊರ ಬಿದ್ದಿಲ್ಲ.

ಜೊತೆಗೆ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಮಂಡ್ಯ ಸಂಸತ್ ಸದಸ್ಯೆ ಸುಮಲತಾ ಅವರ ಪ್ರಕರ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ