ಬೆಂಗಳೂರು :ಕಿಚ್ಚ ಸುದೀಪ್ ಅವರ ಅಂಕಲ್ ಬಸವರಾಜ್ ಬೊಮ್ಮಾಯಿ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅಂಕಲ್ ಪರವಾಗಿ ಮಾತ್ರ ಅಲ್ಲ, ಹಲವು ಬಿಜೆಪಿ ಅಭ್ಯಥಿಗಳ ಪರವಾಗಿ ಅವರು ಪ್ರಚಾರ ಮಾಡಿದ್ದರು. ಇವರಲ್ಲಿ ಎಷ್ಟು ಜನ ಜಯಶಾಲಿಗಳಾದರು ಎಂಬುದು ಬೇರೆ ವಿಚಾರ. ಈ ಬಾರಿ ಕೂಡ ಕಿಚ್ಚ ಸುದೀಪ್ ಅವರನ್ನು ಪ್ರಚಾರಕ್ಕೆ ಕರೆ ತರಲು ಬಿಜೆಪಿ ಯತ್ನ ನಡೆಸುತ್ತಿದೆ, ಆದರೆ ಯಾಕೋ ಕಿಚ್ಚ ಸುದೀಪ್ ಈ ಬಾರಿ ಹೆಚ್ಚಿನ ಆಸಕ್ತಿ ಪ್ರದರ್ಶಿಸುತ್ತಿಲ್ಲ. ಅವರ ಮನವೊಲಿಸುವ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಡುತ್ತಿದ್ದಾರೆ.

ಮುಂಬರುವ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಸ್ಟಾರ್ ಪ್ರಚಾರಕರ ಜೊತೆ ರಾಜ್ಯ ಬಿಜೆಪಿ ಮಾತುಕತೆ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾನಗಲ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು ಹೇಳಿದ್ದು, ಮುಂಬರುವ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಸ್ಟಾರ್ ಪ್ರಚಾರಕರ ಜೊತೆ ರಾಜ್ಯ ಬಿಜೆಪಿ ಮಾತುಕತೆ ನಡೆಸುತ್ತಿದೆ ರಾಜ್ಯದೆಲ್ಲೆಡೆ ಮೋದಿ ಪರ ಅಲೆ ಎದ್ದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಳೆದ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ಪಕ್ಷದ ಹಲವು ಅಭ್ಯರ್ಥಿಗಳ ಪರ ಸುದೀಪ್ ಪ್ರಚಾರ ನಡೆಸಿದ್ದರು.ಆದರೆ, ಈ ಬಾರಿ ಇನ್ನೂ ಪ್ರಚಾರಕ್ಕೆ ಯಾರೂ ಕರೆದಿಲ್ಲ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ