ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆ ಗುರುವಾರದಿಂದ ಆರಂಭ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ, ಈ ಕ್ಷೇತ್ರಗಳ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭವಾಗಿದೆ.

ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಏ.8ರಂದು ಉಮೇದುವಾರಿಕೆಗಳನ್ನು ವಾಪಸ್ ಪಡೆಯಲು ಕೊನೆಯ ದಿನ. ಏ.26ರಂದು ಮತದಾನ. ಜೂ.4ರಂದು ಫಲಿತಾಂಶ ಹೊರಬೀಳಲಿದೆ.

ಇಂದು ನಾಮಪತ್ರ ಸಲ್ಲಿಕೆಯಾಗುವ 14 ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಕೂಟ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ, ಈ ಎರಡೂ ಪಕ್ಷಗಳುಒಟ್ಟಾಗಿಯೇ ಚುನಾವಣೆ ಎದುರಿಸಲಿದೆ. ಬಿಜೆಪಿ ಪಾಲಿಗೆ ಬಂದ 11 ಕ್ಷೇತ್ರಗಳ ಅಭ್ಯರ್ಥಿಗಳು ಹಾಗೂ, ತನ್ನ ಪಾಲಿಗೆ ಸಿಕ್ಕಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್‌ ಇನ್ನೂ ಅಧಿಕೃತವಾಗಿ ಪ್ರಕಟಿಸಿದೆ.

ಈ ನಡುವೆ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಹೊರತುಪಡಿಸಿ ಉಳಿದ 11 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಘೋಷಿಸಿದೆ.

Leave a Reply

Your email address will not be published. Required fields are marked *