ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಮೂರು ದಿನಗಳ ಕಾಲ ಮೈಸೂರಿನಲ್ಲೇ ತಂಗಲಿದ್ದಾರೆ. ಮೈಸೂರು ಮತ್ತು ಚಾಮರಾಜ ನಗರ ಕ್ಷೇತ್ರಗಳಲ್ಲಿ ಕ್ಷೇತ್ರ ಸಂಚಾರವನ್ನು ಅವರು ಮಾಡಲಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ಗೆಲ್ಲಿಸುವುದು ಅವರ ಮುಂದಿರುವ ಬಹುದೊಡ್ಡ ಸವಾಲು.

ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಇರುವ ಮೂರು ದಿನಗಳ ಅವಧಿಯಲ್ಲಿ ತೀವ್ರ ರೂಪದ ರಾಜಕೀಯ ಚಟುವಟಿಕೆ ನಡೆಯಲಿದೆ. ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಹಲವಾರು ಬೆಂಬಲಿಗರು ಕಾಂಗ್ರೆಸ್ ಸೇರಲಿದ್ದಾರೆ. ಜೊತೆಗೆ ಹಳೆಯ ವೈಮನಸ್ಸು ಮರೆತು ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಹೋಗಿ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ.

ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲಿಗರು ಕಾಂಗ್ರೆಸ್ ಗೆ ಸೇರುತ್ತಿರುವುದು ಆ ಪಕ್ಷಕ್ಕೆ ಆಶಾದಾಯಕ ಬೆಳವಣಿಗೆ.
ತಮ್ಮದೇ ಆದ ಬೆಂಬಲಿಗ ಸಮುದಾಯವನ್ನು ಹೊಂದಿರುವ ಶ್ರೀನಿವಾಸ್ ಪ್ರಸಾದ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದಿದ್ದರೂ ಅವರು ಚಾಮರಾಜನಗರ ಮತ್ತು ಮೈಸೂರು ಲೋಕಸಭಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಪ್ರಭಾವವನ್ನು ಹೊಂದಿರುವವರು.

ಶ್ರೀನಿವಾಸ್ ಪ್ರಸಾದ್ ಸಹೋದರ ವಿ.ರಾಮಸ್ವಾಮಿ ಹಾಗೂ ಪುತ್ರ ಭರತ್ ರಾಮಸ್ವಾಮಿ ಕಾಂಗ್ರೆಸ್ ಕಾಂಗ್ರೆಸ್ ಪಕ್ಷವನ್ನು ಸೇರುವ ತೀರ್ಮಾನ ಕೈಗೊಂಡಿದ್ದಾರೆ. ನಾಳೆ ಮದ್ಯಾಹ್ನ 3ಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರಲಿದ್ದಾರೆ.

ಮೈಸೂರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಶ್ರೀನಿವಾಸ ಪ್ರಸಾದ್ ಅಭಿಮಾನಿಗಳು ಹಾಗೂ ಬಿಜೆಪಿ ಪಕ್ಷದ ಪ್ರಮುಖರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ನಾಳೆ ಬಿಜೆಪಿ ಸೇರುತ್ತಿರುವುದು ಮತ್ತೊಂದು ವಿಶೇಷ. ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾಂಗ್ರೆಸ್ ಸೇರುವ 30 ಜನರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಬೆಳವಳಿಗೆ ಬಿಜೆಪಿ ಮೇಲೆ ಭಾರಿ ಹೊಡೆತ ನೀಡುವುದು ನಿಶ್ಚಿತ.
.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ