ನವದೆಹಲಿ : ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತು.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ತಮ್ಮ ಬಂಧನ ಮತ್ತು ಇಡಿ ಕಸ್ಟಡಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿತು
ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಸೋಮವಾರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು “ಕಿಂಗ್‌ಪಿನ್” ಎಂದು ಇಡಿ ಆರೋಪಿಸಿದೆ , ಎಎಪಿ ನಾಯಕ “ತಪ್ಪಿಸಿಕೊಳ್ಳುವ ಉತ್ತರ” ನೀಡಿದ್ದಾರೆ ಮತ್ತು ತನಿಖೆಗೆ ಸಂಬಂಧಿಸಿದ ಮಾಹಿತಿಯನ್ನು ಮರೆಮಾಚುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮರುದಿನ, ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಆರೋಪಿ ದೆಹಲಿ ಸಿಎಂ ಅವರನ್ನು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ನೀಡಿದ್ದರು. ನಂತರ ಕೇಜ್ರಿವಾಲ್ ಅವರ ಇಡಿ ಕಸ್ಟಡಿ ಅವಧಿಯನ್ನು ಏಪ್ರಿಲ್ 1 ರವರೆಗೆ ನಾಲ್ಕು ದಿನಗಳ ಕಾಲ ವಿಸ್ತರಿಸಿತ್ತು.

ಕಸ್ಟಡಿ ವಿಚಾರಣೆ ಸಮಯದಲ್ಲಿ ಐದು ದಿನಗಳಲ್ಲಿ ಕೇಜ್ರಿವಾಲ್ ಅವರ ಹೇಳಿಕೆಗಳನ್ನು ದಾಖಲಿಸಲಾಯಿತು, ಅವರು ತಪ್ಪಿಸಿಕೊಳ್ಳುವ ಉತ್ತರ ನೀಡುತ್ತಿದ್ದಾರೆ ಎಂದು ಇಡಿ ಹೊಸ ರಿಮಾಂಡ್ ಅರ್ಜಿಯಲ್ಲಿ ಆರೋಪಿಸಿತ್ತು.
ಈ ನಡುವೆ ಕಳೆದ 6 ತಿಂಗಳಿನಿಂದ ಜೈಲಿನಲ್ಲಿದ್ದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರು ಜಾಮೀನು ಮೇಲೆ ಹೊರ ಬಂದಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ