ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ; ಸುಮಲತಾ ಮಾತ್ರ ನಾಪತ್ತೆ.

ಕಾಂಗ್ರೆಸ್ ಪಕ್ಷದ್ದು ಜಾತಿ ಕೋಮು ಆಧಾರಿತ. ನಮ್ಮದು ಅಭಿವೃದ್ಧಿ ಆಧಾರಿತ ರಾಜಕಾರಣ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು. ಈ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಾಗಲೀ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಲೀ ಮುಂದೆ ಬರಲಿ ಎಂದು ಅವರು ಸವಾಲು ಹಾಕಿದರು.
ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಕರ್ನಾಟಕದಲ್ಲಿ ಎಲ್ಲ ೨೮ ಸ್ಥಾನಗಳನ್ನು ಮೈತ್ರಿ ಕೂಟ ಗೆಲ್ಲಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಹೇಳಿ ಕಳಿಸಿದ್ದಾರೆ. ನೀವು ಕುಮಾರಸ್ವಾಮಿ ಅವರನ್ನು ದೆಹಲಿಗೆ ಕಳುಹಿಸಿ ಮೋದಿ ಅವರ ಜೊತೆ ಕೆಲಸ ಮಾಡುವಂತೆ ಮಾಡಬೇಕು ಎಂದು ಅವರು ಕರೆ ನೀಡಿದರು,
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇವತ್ತಿನ ಜನ ಸಂದಣಿಯನ್ನು ನೋಡಿದರೆ ಕುಮಾರಸ್ವಾಮಿ ಅವರು ಸುಮಾರು ೨ ಲಕ್ಶ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಇದನ್ನು ತಡೆಯಲು ಯಾವ ಶಕ್ತಿಗೂ ಸಾಧ್ಯವಿಲ್ಲ ಎಂದರು.
ತಾವು ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭಿಸಿದ ಯೋಜನೆಗಳನ್ನು ಸಿದ್ದರಾಮಯ್ಯ ಸರ್ಕಾರ ನಿಲ್ಲಿಸಿದೆ ಯಾಕೆ ಎಂದು ಅವರು ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಅಧಿಕೃತವಾಗಿ ಲೋಕಸಭಾ ಚುನಾವಣಾ ಕಣಕ್ಕೆ ಧುಮಿಕಿದರು. ಅವರು ಮಂಡ್ಯ ಕ್ಶೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿಯ ವರಿಷ್ಟ ನಾಯಕ ಬಿ.ಎಸ್. ಯಡಿಯೂರಪ್ಪ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮೊದಲಾದವರು ಹಾಜರಿದ್ದರು.
ಕುಮಾರಸ್ವಾಮಿ ಅವರ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರು.
ಆದರೆ ಸಂಸದೆ ಸುಮಲತಾ ಮಾತ್ರ ಎಲ್ಲೂ ಕಾಣಿಸಿಕೊಳ್ಳಲಿಲ್ಲ. ಸುಮಲತಾ ಅವರು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿರುವುದರಿಂದ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಎಂದು ನಿರೀಕ್ಷಿಸಲಾಗಿತ್ತು. ಬಿಜೆಪಿ ಪ್ರಮುಖ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರೂ ಸುಮಲತಾ ಗೈರು ಹಾಜರಾಗಿದ್ದರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You missed