ಸಂಸದೆ ಸುಮಲತಾ ಅಂಬರೀಶ್ ನಾಳೆ ಬೆಳಿಗ್ಗೆ ೧೧.೩೦ ಕ್ಕೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ,
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಈ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
ಬಿಜೆಪಿಯ ಹಿರಿಯ ನಾಯಕರೆಲ್ಲ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಜೆಡಿಎಸ್ ನಾಯಕರಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನ್ ಇದೆಯೋ ಇಲ್ಲವೀ ತಿಳಿಯದು. ಹಾಗೆಯೇ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸಿರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆಯೆ ಎಂಬ ಬಗ್ಗೆಯೂ ಯಾವುದೇ ವಿವರ ಲಭ್ಯವಿಲ್ಲ.
ಆದರೆ ಸುಮಲತ ಇಂದು ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ವಿವರಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಅಭಿಮಾನಿಗಳಿಗೆ ಈ ಬಗ್ಗೆ ಮಾಹಿತಿ ನೀಡಿರುವ ಅವರು ತಾವು ಸದಾ ಮಂಡ್ಯ ಜಿಲ್ಲೆಯ ಜನರ ಸೇವೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You missed