ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಬಳಿಕ ಬೆಳಗ್ಗೆ 11 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಯಿತು.

ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ . ಪಿಯುಸಿ ಕಲಾ ವಿಭಾಗದಲ್ಲಿ ಇಬ್ಬರು ಟಾಪರ್​ಗಳು. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ.

Leave a Reply

Your email address will not be published. Required fields are marked *