ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅಂತ್ಯಕ್ರಿಯೆ, ಬುಧವಾರ ಬೆಳಿಗ್ಗೆ ಚಾಮರಾಜಪೇಟೆಯ ಟಿಆರ್​​ ಮೀಲ್​ ಚಿತಾಗಾರದಲ್ಲಿ ನಡೆಯಲಿದೆ.

ಅಂತಿಮ ದರ್ಶನಕ್ಕೆ ದ್ವಾರಕೀಶ ಅವರ ಪಾರ್ಥೀವ ಶರೀರವು ಬುಧವಾರ ಬೆಳಗಿನ ಜಾವದವರೆಗೂ ಅವರ ನಿವಾಸದಲ್ಲಿಯೇ ಇರಲಿದೆ. ಗಣ್ಯರ ಮತ್ತು ಕುಟುಂಬಸ್ಥರು ಅಂತಿಮ ದರ್ಶನ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ. 11 ಗಂಟೆಯ ನಂತರ ಶವವನ್ನು ಚಾಮರಾಜಪೇಟೆಯ ಟಿಆರ್​ಮೀಲ್​​ ಚಿತಾಗಾರಕ್ಕೆ ತರಲಾಗುತ್ತದೆ. ಇಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Leave a Reply

Your email address will not be published. Required fields are marked *