ನವದೆಹಲಿ : ಭಾರತ ಮತ್ತು ಪಾಕಿಸ್ತಾನ ತಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಅಮೇರಿಕ ಮತ್ತೊಮ್ಮೆ ಸೂಚನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಭಯೋತ್ಪಾದಕರನ್ನು ಹತ್ಯೆ ಮಾಡಲು ದೇಶದ ಗಡಿ ದಾಟಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೇರಿಕದ ಉನ್ನತ ಅಧಿಕಾರಿಗಳು ಪರಿಸ್ಥಿತಿ ಇನ್ನಷ್ಟು ಉಲ್ಬಣ ಗೊಳ್ಳದಂತೆ ನೋಡಿಕೊಳ್ಳುವಂತೆ ಸೂಚಿಸಿದ್ದಾರೆ.

ಪಾಕಿಸ್ತಾನದಲ್ಲಿ ಭಯೋತ್ಪಾದಕರನ್ನು ಹತ್ಯೆ ಮಾಡಲಗುತ್ತಿದೆ. ಇದರಲ್ಲಿ ಭಾರತದ ಕೈವಾಡವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಅಮೇರಿಕ ಸ್ಟೇಟ್ ಡಿಪಾರ್ಟಮೆಂಟ್ ವಕ್ತಾರ ಮಾಥ್ಯೂ ಮಿಲ್ಲರ್ ಭಾರತ ಮತ್ತು ಪಾಕಿಸ್ತಾನ ತಮ್ಮ ನಡುವಿನ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಅಮೇರಿಕ ಬಯಸುತ್ತದೆ. ಈ ವಿಚಾರದಲ್ಲಿ ನಾವು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದಿದ್ದಾರೆ.

ಗುಸ್ಕೇ ಮಾರೆಂಗೆ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ನಾವು ಈ ಮೊದಲೂ ಸ್ಪಷ್ಟಪಡಿಸಿದ್ದೇವೆ. ಭಾರತ ಮತ್ತು ಪಾಕಿಸ್ತಾನ ಮಾತುಕತೆಯ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಯತ್ನಿಸಬೇಕು. ಇದು ನಮ್ಮ ಆಶಯ ಎಂಡರು.

ಉತ್ತರಾಖಂಡದ ಋಷಿಕೇಶದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದ ಮೋದಿ ದೇಶದಲ್ಲಿ ಈಗ ಸದೃಡ ಸರ್ಕಾರವಿದೆ. ಇದು ಮೋದಿ ಸರ್ಕಾರ. ಈ ಸರ್ಕಾರ ಭಯೋತ್ಪಾದಕರ ಮನೆಗಳಿಗೆ ನುಗ್ಗಿ ಹೊಡೆದು ಹಾಕುತ್ತದೆ ಎಂದು ಹೇಳಿದ್ದರು.

Leave a Reply

Your email address will not be published. Required fields are marked *