ನವದೆಹಲಿ : ದೇಶದ ಸಂಪತ್ತನ್ನು ಮುಸ್ಲೀಂ ರಿಗೆ ನೀಡುವ ಆರೋಪ ಮುಗಿದ ಮೇಲೆ ಪ್ರಧಾನಿ ನರೇಂದ್ರ ಮೋದಿ ಮುಸ್ಲೀಂ ರಿಗೆ ಸಂಬಂಧಿಸಿದ ಇನ್ನೊಂದು ವಿಚಾರವನ್ನು ಕೈಗೆತ್ತಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಂದ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲೀಮರಿಗೆ ನೀಡಲು ಮುಂದಾಗಿತ್ತು ಎಂಬುದು ಮೋದಿಯವರ ಇಂದಿನ ಆರೋಪ.

ಇಂದೂ ಸಹ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡು ಅವರು ಈ ಆರೋಪ ಮಾಡಿದರು.
2004 ರಲ್ಲೇ ಆಂಧ್ರ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮೀಸಲಾತಿಯನ್ನು ಕಡಿಮೆ ಮಾಡಿ ಮುಸ್ಲೀಂ ರಿಗೆ ಮೀಸಲಾತಿ ನೀಡಲು ಮುಂದಾಗಿತ್ತು. ಇವರಿಗೆ ಸಂವಿಧಾನ ಎಂದರೆ ಗೌರವವಿಲ್ಲ ಎಂದು ಅವರು ದೂಷಿಸಿದರು.

ಕಾಂಗ್ರೆಸ್ ಮತ್ತು ಅವರ ಮಿತ್ರ ಪಕ್ಷಗಳು ಅಧಿಕಾರದಲ್ಲಿ ಇದ್ದಾಗ ಅವರದು ಓಟ್ ಬ್ಯಾಂಕ್ ರಾಜಕಾರಣವಾಗಿತ್ತು. ತಮ್ಮ ಮತ ಬ್ಯಾಂಕ್ ಆದವರಿಗೆ ಪ್ರತ್ಯೇಕ ಮೀಸಲಾತಿ ನೀಡುವುದು ಅವರ ಉದ್ದೇಶವಾಗಿತ್ತು ಎಂದು ಮೋದಿ ಹೇಳಿದರು.

ಕಾಂಗ್ರೆಸ್ ಮೊದಲಿನಿಂದಲೂ ಮತ ಬ್ಯಾಂಕ್ ರಾಜಕಾರಣ ಮಾಡಿಕೊಂಡು ಬಂದಿದೆ. 2004ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಅದು ಮಾಡಲು ಹೊರಟ ಮೊದಲ ಕೆಲಸ ಎಂದರೆ ಆಂಧ್ರ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮೀಸಲಾತಿಯನ್ನು ಕಡಿಮೆ ಮಾಡುವ ಯತ್ನವಾಗಿತ್ತು ಎಂದು ಮೋದಿ ದೂರಿದರು.
2004 ರಿಂದ 2010 ರ ಅವಧಿಯಲ್ಲಿ ನಾಲ್ಕು ಬಾರಿ ಮುಸ್ಲೀಮರಿಗೆ ಮೀಸಲಾತಿ ನೀಡುವ ಯತ್ನವನ್ನು ಕಾಂಗ್ರೆಸ್ ಮಾಡಿತ್ತು ಎಂದು ಮೋದಿ ಹೇಳಿದರು.

Leave a Reply

Your email address will not be published. Required fields are marked *