ನವದೆಹಲಿ : ಚುನಾವಣಾ ಮತಯಂತ್ರ ಅಥವಾ ಇವಿಎಂ ಬಗ್ಗೆ ಕೆಲವರು ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದೆ.

ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೆಲವೊಂದು ವಿವರಗಳನ್ನು ಕೇಳಿದೆ. ಚುನಾವಣಾ ಆಯೋಗದ ಅಧಿಕಾರಿಗಳು ಬುಧವಾರ ಅಂದರೆ ಇಂದು ಮಧ್ಯಾಹ್ನ ನ್ಯಾಯಾಲಯದ ಮುಂದೆ ಹಾಜರಿರುವಂತೆಯೂ ಸೂಚಿಸಿದೆ.

ಇವಿಎಂ ನಲ್ಲಿ ದಾಖಲಾಗುವ ಮತಗಳ ಕುರಿತಂತೆ ವಿವಿಪ್ಯಾಟ್ ಮೂಲಕ ಸಂಪೂರ್ಣ ಪುನರ್ ಪರಿಶೀಲನೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತ ಅರ್ಜಿಗಳ ವಿಚಾರಣೆ ಕಾಯ್ದಿರಿಸಿದ ನ್ಯಾಯಮೂರ್ತಿ ಸಂಜಯ್ ಖನ್ನಾ ಮತ್ತು ದೀಪಂಕರ ದತ್ತಾ ಅವರನ್ನು ಒಳಗೊಂಡ ನ್ಯಾಯಪೀಠ ಕೆಲವೊಂದು ವಿಷಯಗಳ ಕುರಿತು ಸ್ಪಷ್ಟನೆ ಬೇಕಾಗಿದೆ.

ಚುನಾವಣಾ ಅಯೋಗ ನೀಡಿರುವ ಉತ್ತರದಲ್ಲಿ ಗೊಂದಲಗಳಿವೆ ಎಂದು ಹೇಳಿದೆ.

Leave a Reply

Your email address will not be published. Required fields are marked *