ನ್ಯಾಯಾಲಯದ ಸೂಚನೆಯ ನಂತರವೂ ನಾಮಾಕಾವಾಸ್ತೆ ಬರ ಪರಿಹಾರ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟವನ್ನು ಮುಂದುವರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈ ತೀರ್ಮಾನದ ಭಾಅಗವಾಗಿ ನಾಳೆ ಭಾನುವಾರ ವಿಧಾನಸೌಧ ದ ಮುಂದೆ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ,
ಬಾಗಿಲಕೋಟೆ ಜಿಲ್ಲೆಯ ರಬಕವಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈ ವಿಷಯ ಪ್ರಕಟಿಸಿದರು.
ನಾವು ನ್ಯಾಯಾಲಯದ ಮೊರೆ ಹೋದ ಮೇಲೆ ಈಗ ೩ಮ್೪೯೮ ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ನಾವು ಪೂರ್ಣ ಹಣ ಬಿಡುಗಡೆಯಾಗುವ ವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಅವರು ಹೇಳಿದರು.
ನಾವು ಕಳೆದ ಅಕ್ಟೋಬರ್ ತಿಂಗಳಿನಲ್ಲೇ ಬರಗಾಲ ಪರಿಹಾರ ಹಣ ನೀಡುವಂತೆ ಮನವಿ ಮಾಡಿದ್ದೆವು. ಇದಾದ ಮೇಲೆ ಕೇಂದ್ರ ಅಧಿಕಾರಿಗಳ ತಂಡ ಬಮ್ದು ಅಧ್ಯಯನ ಮಾಡಿತು. ಹೀಗಿದ್ದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾವು ಮೂರು ತಿಂಗಳು ವಿಳಂಬವಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಸುಳ್ಳು ಹೇಳುತ್ತ ಬಂದರು ಎಂದು ಅವರು ಆರೋಪಿಸಿದರು.
ನಾಳಿನ ಪ್ರತಿಭಟನಾ ಸಭೆಯಲ್ಲಿ ತಮ್ಮ ಜೊತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇತರರು ಪಾಲ್ಗೊಳ್ಳುವರು ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *