ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಸೋಮವಾರ ಮತ್ತೆ ಜೈಲು ಕಂಬಿ ಎಣಿಸುವಂತಾಯಿತು.

ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಕಳೆದ ಮಂಗಳವಾರ ರದ್ದು ಮಾಡಿತ್ತು ಮತ್ತು ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಆರೋಪಿಗೆ ಸೂಚಿಸಿತ್ತು.

ಸುಪ್ರೀಂ ಕೋರ್ಟ್‌ ಆದೇಶದಂತೆ ಮುರುಘಾ ಶ್ರೀ ಇಂದು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ಗೆ ಶರಣಾಗಿದ್ದಾರೆ. ಆರೋಪಿ ಶ್ರೀಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಮೇ 27ಕ್ಕೆ ಮುಂದಿನ ವಿಚಾರಣೆ ನಿಗದಿಗೊಳಿಸಿ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *