ಬೆಂಗಳೂರು : ಬೆಂಗಳೂರು:ಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಕೋರ್ಟ್ 7 ದಿನ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಎಸ್ ಐಟಿ ಕಸ್ಟಡಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ರೇವಣ್ಣರನ್ನು ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಧೀಶರು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿದ ಹಿನ್ನೆಲೆಯಲ್ಲಿ ಕೋರ್ಟ್ ಹಾಲ್ ನಿಂದ ಹೊರಬಹುವಾಗ ರೇವಣ್ಣ ಕಣ್ಣೀರು ಹಾಕಿದರು. ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಸ್​ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ರೇವಣ್ಣ ಆಪ್ತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಇಂದು ನಡೆಸಿದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ. ಹೀಗಾಗಿ ರೇವಣ್ಣ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಒಂದು ವೇಳೆ ಜಾಮೀನು ಸಿಗದ್ದಿದ್ದರೆ ಮೇ 14ರವರೆಗೆ ರೇವಣ್ಣ ಜೈಲಿನಲ್ಲೇ ಇರಬೇಕಾಗುತ್ತದೆ.

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರನ್ನು ಸಿಐಡಿ ವಿಶೇಷ ತನಿಖಾ ತಂಡವು (ಎಸ್‌ಐಟಿ) ಮೇ 4ರ ಶನಿವಾರ ಸಂಜೆ ಬಂಧಿಸಿತ್ತು.

Leave a Reply

Your email address will not be published. Required fields are marked *