Shiva Rajkumar | ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕಿತ್ಸೆ ಮತ್ತು ಸದ್ಯದ ಆರೋಗ್ಯ ಸ್ಥಿತಿಯ ಕುರಿತು ಶಿವರಾಜ್‌ ಕುಮಾರ್‌ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದರು.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಚಿಕಿತ್ಸೆ ಮತ್ತು ಸದ್ಯದ ಆರೋಗ್ಯ ಸ್ಥಿತಿಯ ಕುರಿತು ಶಿವರಾಜ್‌ ಕುಮಾರ್‌ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ’ ಎಂದು ತಿಳಿಸಿದ್ದರು.

ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

ಕ್ಯಾನ್ಸರ್‌ ಸಂಬಂಧಿ ಶಸ್ತ್ರ ಚಿಕಿತ್ಸೆಗೆಂದು ಅಮೆರಿಕಕ್ಕೆ ಹೋಗಿದ್ದ ಶಿವರಾಜ್ ಕುಮಾರ್ ಭಾನುವಾರ(ಜ.26) ಬೆಳಿಗ್ಗೆ ಬೆಂಗಳೂರಿಗೆ ಮರಳಿದ್ದಾರೆ. ಮೂತ್ರಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಅಮೆರಿಕಾದ ಮಿಯಾಮಿಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ವಾಪಸ್ಸಾಗಿದ್ದಾರೆ.

ಇದೇ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಸಿಎಂ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಹಾಗೂ ಶಾಸಕ ಭೀಮಣ್ಣ ನಾಯ್ಕ ಉಪಸ್ಥಿತರಿದ್ದರು.

Author

error: