ಕರ್ನಾಟಕಕ್ಕೆ ಬಂದು ಮತ ಕೇಳಲು ನಿಮಗೆ ನೈತಿಕತೆ ಇದೆಯಾ ? ಕೇಂದ್ರ ಗೃಹ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿದ್ದಾರೆ. ಅಮಿತ್ ಶಾ ಬೆಂಗಳೂರಿನಲ್ಲಿ ಕಾಂಗ್ರೆಸ್ ಮೇಲೆ ದಾಳಿ ಮಾಡಿದರೆ, ಮೈಸೂರಿನಿಂದಲೇ ಸಿದ್ದರಾಮಯ್ಯ ಪ್ರಶ್ನೆಗಳ ಸುರಿ ಮಳೆ ಗೈದಿದ್ದಾರೆ.

ರಾಜ್ಯಕ್ಕೆ ಅಮಿತ್ ಶಾ, ಜೆ ಪಿ ನಡ್ಡಾ, ಪ್ರಧಾನಿ ಮೋದಿಯವರು ಯಾರೇ ಬರಲಿ ಮತದಾರರ ಮನ ಗೆಲ್ಲಲು ಸಾಧ್ಯವಾಗುವುದಿಲ್ಲ. ಅಮಿತ್ ಶಾ ಅವರು ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರು, ಕರ್ನಾಟಕಕ್ಕೆ ಬರ ಪರಿಹಾರ ಹಣ ನೀಡಿದ್ದಾರೆಯೇ, ಕರ್ನಾಟಕಕ್ಕೆ ಬಂದು ಮತ ಕೇಳಲು ಅವರಿಗೆ ಯಾವ ನೈತಿಕತೆ ಇದೆ ಈ ಪ್ರಶ್ನೆ ಮುಂದಿಟ್ಟವರು ಸಿದ್ದರಾಮಯ್ಯ.

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಬಿಜೆಪಿ ಹೈಕಮಾಂಡ್ ಬಳಿ ಕರ್ನಾಟಕಕ್ಕೆ ಬರ ಪರಿಹಾರ ಕೊಡಿ ಎಂದು ಕೇಳಬೇಕಲ್ಲವೆ ?, ಮೇಕೆದಾಟುಗೆ ಅನುಮತಿ ಕೊಡಿಸಬೇಕಲ್ಲವೆ ?, ಮಹದಾಯಿಗೆ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸಬಹುದಲ್ಲವೆ ? ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡಿಸಿಕೊಡಬಹುದಿತ್ತು 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ಪರಿಹಾರ ಕೇಂದ್ರ ಸರ್ಕಾರ ನೀಡಿದೆಯೆ ? ಇದು ಸಿದ್ದರಾಮಯ್ಯ ಮುಂದಿಟ್ಟ ಪ್ರಶ್ನೆಗಳು.

ನಾವು ಕೇಂದ್ರ ಸರ್ಕಾರಕ್ಕೆ ಮೂರು ಮನವಿ ಪತ್ರಗಳನ್ನು ಕೊಟ್ಟೆವು. ಕೇಂದ್ರ ತಂಡ ಬಂದು ಬರ ಅಧ್ಯಯನ ನಡೆಸಿತು. ನಾನು ಡಿಸೆಂಬರ್ ನಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿ ಎಂದು ಮನವಿ ಮಾಡಿದ್ದೆ. ಡಿಸೆಂಬರ್ 23ನೇ ತಾರೀಖಿಗೆ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದರು. ಆದಾಗಿ 5 ತಿಂಗಳಾದರೂ ಕರ್ನಾಟಕಕ್ಕೆ ಬರ ಪರಿಹಾರಕ್ಕ ಒಂದು ರೂಪಾಯಿನೂ ನೀಡಿಲ್ಲ ಎಂದು ಆರೋಪಿಸಿದರು.

ಇದನ್ನು ಕೇಳಿದರೆ ಕುಮಾರಸ್ವಾಮಿಯವರೇ ಬಿಜೆಪಿಯ ವಕ್ತಾರರಾಗಿದ್ದಾರೆ. ಇದು 7 ಕೋಟಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು ಕೇಳಿದರು.

Author

error: