ನವದೆಹಲಿ : ದೇಶದ ಪ್ರಜಾಪ್ರಭುತ್ವ ಅಪಾಯದ ಸ್ಥಿತಿಯಲ್ಲಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಹಾಳುಗೆಡುವುತ್ತಿದ್ದಾರೆ, ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರುವಂತೆ ಒತ್ತಡ ಹೇರಲಾಗುತ್ತಿದೆ. ಇದಕ್ಕಾಗಿ ಬೇರೆ ಬೇರೆ ತಂತ್ರಗಳನ್ನು ಬಳಸಲಾಗುತ್ತಿದೆ ಎಂದು ಅವರು ಆಪಾದಿಸಿದ್ದಾರೆ,
ಪಕ್ಷದ ಚುನಾವಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ದೇಶವು ನಿರುದ್ಯೋಗ, ಹಣದುಬ್ಬರ, ಆರ್ಥಿಕ ಬಿಕ್ಕಟ್ಟು ಮತ್ತು ಅಸಮಾನತೆಯನ್ನೆ ಪ್ರೋತ್ಸಾಹಿಸುತ್ತಾ ಬಂದ ಸರ್ಕಾರ ಅಧಿಕಾರದಲ್ಲಿದೆ ಎಂದು ಅವರು ಹೇಳಿದರು.
ದೇಶದ ಇಂದಿನ ಪರಿಸ್ಥಿತಿ ಕುರಿತು ಮಾತನಾಡಿದ ಅವರು ಇಂದು ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನವನ್ನು ಬದಲಿಸುವ ಯತ್ನ ನಡೆಯುತ್ತಿದೆ. ಪಿತೂರಿ ಮಾಡಲಾಗುತ್ತಿದೆ ಎಂದು ಸೋನಿಯಾ ಹೇಳಿದರು
ದೇಶದಲ್ಲಿ ಸರ್ವಾಧಿಕಾರದ ಆಡಳಿತ ನಡೆಯುತ್ತಿದೆ. ತಮ್ಮನ್ನು ತಾವು ಶ್ರೇಷ್ಠ ಎಂದು ಪರಿಗಣಿಸಿರುವ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ತನಿಖಾ ಸಂಸ್ಥೆಗಳನ್ನು ಬಂಧಿಸಿರುವುದನ್ನು ಉಲ್ಲೇಖಿಸಿ ಕೇಂದ್ರದ ಬಿಜೆಪಿ ಆಡಳಿತದಲ್ಲಿ ಪ್ರತಿಪಕ್ಷಗಳು ದಾಳಿಗೆ ಒಳಗಾಗುತ್ತಿವೆ ಎಂದು ಹೇಳಿದರು.
