ಶಿವಮೊಗ್ಗ : ತಾವು ಕಟ್ಟಿದ ಪಕ್ಷದ ಅವಗಣನೆಗೆ ಒಳಗಾದವರು ಕೆ.ಎಸ್. ಈಶ್ವರಪ್ಪ. ಅವರನ್ನು ಬಿಜೆಪಿಯ ಯಾವ ನಾಯಕರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅವರ ಜೊತೆ ಮಾತನಾಡುವುದಕ್ಕೂ ಯಾರೂ ಸಿದ್ದರಿಲ್ಲ. ಈಗ ಅವರು ದುರಂತ ನಾಯಕ.
ಈಗ ಅವರು ಶಿವಮೊಗ್ಗ ಕ್ಷೇತ್ರದಿಂದ ಚುನಾವಣೆಗೆ ಇಳಿಯಲು ಸಿದ್ದರಾಗಿದ್ದಾರೆ. ಇದರ ಉದ್ದೇಶ ಯಡಿಯೂರಪ್ಪ ಮತ್ತು ಅವರ ಮಕ್ಕಳಿಗೆ ಬುದ್ದಿ ಕಲಿಸುವುದು. ಅವರ ತಮ್ಮ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ ಅವರ ಭಾವ ಚಿತ್ರ ಬಳಸಲು ಮುಂದಾಗಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ. ಈಶ್ವರಪ್ಪ ಈ ವಿಚಾರದಲ್ಲಿ ಈಗ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ.
ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಟೀಕಿಸಿದ್ದರು. ಜೊತೆಗೆ ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್ ಅಶೋಕ್ ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ಚುನಾವಣೆಗೆ ಬಳಸುವಂತಿಲ್ಲ. ಬಿಜೆಪಿ ಮಾತ್ರ ಮೋದಿ ಅವರ ಭಾವಚಿತ್ರವನ್ನು ಬಳಸಬಹುದು ಎಂದು ಟೀಕಿಸಿದ್ದರು.
ಇದರಿಂದ ಕೋಪಗೊಂಡ ಈಶ್ವರಲ್ಲ, ರಾಘವೇಂದ್ರ ಅವರಿಗೆ ತಿರುಗೇಟು ನೀಡಿದ್ದರು. ಮೋದಿ ಅವರಪ್ಪನ ಆಸ್ತಿಯೇ, ಮೋದಿ ಭಾವಚಿತ್ರವನ್ನು ಯಾರಾದರೂ ಬಳಸಬಹುದು ಎಂದು ಹೇಳಿದ್ದರು. ಇದೀಗ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೊರೆಹೋಗಿದ್ದಾರೆ. ಶುಕ್ರವಾರ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಬಿಜೆಪಿ ಟಿಕೆಟ್ ನೀಡದ್ದರಿಂದ ಬಂಡಾಯವೆದ್ದಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿ ವೈ ರಾಘವೇಂದ್ರ ಎದುರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಪ್ರಚಾರದಲ್ಲಿ ಬಿಜೆಪಿ ಚಿಹ್ನೆ ಹೊರತುಪಡಿಸಿ ಮೋದಿ ಭಾವಚಿತ್ರವನ್ನು ಈಶ್ವರಪ್ಪ ಬಳಸುತ್ತಿದ್ದಾರೆ.
.
