ಬೆಂಗಳೂರು : ಚುನಾವಣೆ ಮುಗಿದ ಮೇಲೆ ಕುಮಾರಸ್ವಾಮಿ ಬಿಜೆಪಿಯನ್ನು ಸೇರಿಕೊಳ್ಳುತ್ತಾರೆ. ಇಲ್ಲವೇ ಅವರನ್ನೇ ಬಿಜೆಪಿ ದೂರ ತಳ್ಳುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭವಿಷ್ಯ ನುಡಿದಿದ್ದಾರೆ.
ಇನ್ನೊಂದು ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಆಗುತ್ತದೆ. ನನಗೆ ಮತ್ತೆ ನಿಮ್ಮ ಸೇವೆ ಮಾಡುವ ಅವಕಾಶ ಸಿಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿದ ಹೆಳಿಕೆಗೆ ಶಿವಕುಮಾರ್ ಈ ಪ್ರತಿಕ್ರಿಯೆ ನೀಡಿದರು.
ನಿನ್ನೆ ಹಾಸನ ಮತ್ತು ಅರಕಲಗೂಡಿನಲ್ಲಿ ಮಾತನಾಡಿದ ಕುಮಾರಸ್ವಾಮಿ ರಾಜಕೀಯ ಬದಲಾವಣೆಯ ಮಾತನಾಡಿದ್ದರು. ಅವರ ಮಾತುಗಳಲ್ಲಿ ಅವರು ಮತ್ತೆ ಮುಖ್ಯಮಂತ್ರಿಯಾಗುವ ಬಯಕೆ ಕಾಣುತ್ತಿತ್ತು.







