ಶ್ರೀನಗರ : ಜಮ್ಮುವಿನ ಕಾಶ್ಮೀರಿ ಪಂಡಿತರ ಸಂಘಟನೆ ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಂಡಿದೆ. ಆಲ್ ಇಂಡಿಯಾ ಕಾಶ್ಮೀರಿ ಹಿಂದೂ ಫೋರಂ ಹೆಸರಿನ ಈ ಸಂಘಟನೆ ಶನಿವಾರ ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಂಡಿತು.

ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಕಾರ್ ರಸೂಲ್ ವಾನಿ ಈ ಸಂಘಟನೆಯ ಪದಾಧಿಕಾರಿಗಳನ್ನು ಪಕ್ಷಕ್ಕೆ ಸ್ವಾಗತಿಸಿದರು.

1998 ರಲ್ಲಿ ಪ್ರಾರಂಭವಾದ ಈ ಸಂಘಟನೆ ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಂಡಿರುವುದರಿಂದ ಕಾಂಗ್ರೆಸ್ ಗೆ ಶಕ್ತಿ ಬಂದಿದೆ ಎಂದು ವಾನಿ ಹೇಳಿದರು.

ಬಿಜೆಪಿ ತನ್ನ ಹತ್ತು ವರ್ಷಗಳ ಆಡಳಿತದಲ್ಲಿ ಕಾಶ್ಮೀರಿ ಪಂಡಿತರನ್ನು ಮೂರ್ಖರನ್ನಾಗಿಸಿದೆ. ಈಗ ಉಳಿದ ಕಾಶ್ಮೀರಿ ಪಂಡಿತರ ಸಂಘಟನೆಗಳು ಕಾಂಗ್ರೆಸ್ ನಲ್ಲಿ ವಿಲೀನಗೊಳ್ಳಬೇಕು ಎಂದು ಅವರು ಕರೆ ನೀಡಿದರು.

Author

Leave a Reply

Your email address will not be published. Required fields are marked *