ಮಡಿಕೇರಿ : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಗ್ರಾಮಾಂತರ ಪ್ರದೇಶದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಹೇಳಿಕೆ ತೀವ್ರ ವಿರೋಧಕ್ಕೆ ಕಾರಣವಾಗಿದೆ.
ಹೆಣ್ಣು ಮಕ್ಕಳನ್ನು ಅವಮಾನಿಸುವ ಈ ಹೇಳಿಕೆಯ ವಿರುದ್ಧ ಮಹಿಳೆಯರು ಕಾಂಗ್ರೆಸ್ ಪಕ್ಷದ ನಾಯಕರು ತಿರುಗಿ ಬಿದ್ದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕುಮಾರಸ್ವಾಮಿ ಅವರು ಸೋಲಿನ ಭಯದಿಂದ ಈ ಮಾತನ್ನು ಹೇಳುತ್ತಿದ್ದಾರೆ, ಜೊತೆಗೆ ಮಹಿಳೆಯರು ತಮಗೆ ಮತ ನೀಡುವುದಿಲ್ಲ ಎಂಬುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಮಹಿಳೆಯರ ವಿರುದ್ಧ ಇಂಥ ಮಾತುಗಳನ್ನು ಆಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೊಡಗಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಈ ಹೇಳಿಕೆಯನ್ನು ಗಮನಿಸಿಲಿ ಎಂದಿದ್ದಾರೆ. ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಕುಮಾರಸ್ವಾಮಿ ಬಿರುದ್ಧ ಪ್ರತಿಭಟನೆ ನಡೆಸಿದರು.







