ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಕಳೆದ ಚುನಾವಣೆಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ ಸೋಮಣ್ಣ ಈಗ ಮತ್ತೆ ಚುನಾವಣೆಗೆ ನಿಂತಿದ್ದಾರೆ ಎಂದರೆ ಎಷ್ಟು ಕೋಟಿ ಲೂಟಿ ಮಾಡಿರಬಹುದು ?
Siddaramaiah vs Somanna : ವರುಣಾ ಕ್ಷೇತ್ರದಲ್ಲಿ ನನ್ನ ವಿರುದ್ಧ ಸ್ಪರ್ಧಿಸಿದ್ದ ವಿ.ಸೋಮಣ್ಣ ರೂ.50 ಕೋಟಿಯಿಂದ ರೂ.60 ಕೋಟಿ ಹಣ ಖರ್ಚು ಮಾಡಿದ್ದಾರೆ
ತುಮಕೂರು : ವಿ ಸೋಮಣ್ಣ ಬಿಜೆಪಿ ನಾಯಕ, ಮಾಜಿ ಸಚಿವ. ಸತತವಾಗಿ ಚುನಾವಣೆಗೆ ನಿಲ್ಲುತ್ತಿರುವ ಇವರು ಎಷ್ಟು ಹಣ ಲೂಟಿ ಮಾಡಿರಬಹುದು ? ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನೆ.
ಈ ಪ್ರಶ್ನೆಯನ್ನು ಜನರ ಮುಂದಿಟ್ಟ ಅವರು ಸೋಮಣ್ಣ ಎಷ್ಟು ಹಣ ಲೂಟಿ ಮಾಡಿರಬಹುದು ನೀವೇ ಊಹಿಸಿ ಎಂದು ನೆರದಿದ್ದ ಜನರಿಗೆ ಬಿಟ್ಟರು.
ತಿಪಟೂರು ತಾಲ್ಲೂಕಿನ ಕೆ.ಬಿ.ಕ್ರಾಸ್ ಬಳಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸೋಮಣ್ಣ ವಿರುದ್ಧ ವಾಗ್ದಾಳಿ ನಡೆಸಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ನನ್ನ ವಿರುದ್ಧ ಸ್ಪರ್ಧಿಸಿದ್ದ ವಿ.ಸೋಮಣ್ಣ ರೂ.50 ಕೋಟಿಯಿಂದ ರೂ.60 ಕೋಟಿ ಹಣ ಖರ್ಚು ಮಾಡಿದ್ದಾರೆ. ಚಾಮರಾಜನಗರದಲ್ಲೂ ಅಷ್ಟೇ ಪ್ರಮಾಣದ ಹಣ ಖರ್ಚು ಮಾಡಿ ಸೋತಿದ್ದಾರೆ. ಸೋಮಣ್ಣ ಬಳಿ ಹಣವಿದೆ ಎಂದು ತುಮಕೂರಿಗೆ ಕರೆತಂದು ನಿಲ್ಲಿಸಿದ್ದಾರೆ. ವರುಣಾ, ಚಾಮರಾಜನಗರದಲ್ಲಿ ಅಷ್ಟೊಂದು ದೊಡ್ಡ ಮೊತ್ತದ ಹಣ ಖರ್ಚು ಮಾಡಿದ್ದರು. ಚುನಾವಣೆ ನಡೆದು ಇನ್ನೂ ಹತ್ತು ತಿಂಗಳು ಕಳೆಯುವುದರ ಒಳಗೆ ಮತ್ತೊಂದು ಚುನಾವಣೆಗೆ ನಿಂತಿದ್ದಾರೆ. ಹಾಗಾದರೆ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಸಮಯದಲ್ಲಿ ಸೋಮಣ್ಣ ಇನ್ನೆಷ್ಟು ಭ್ರಷ್ಟಾಚಾರ ನಡೆಸಿ, ಹಣ ಮಾಡಿರಬಹುದು ? ಈ ಪ್ರಶ್ನೆಗಳನ್ನು ಅವರು ಜನರ ಮುಂದೆ ಇಟ್ಟರು.
ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸೋಮಣ್ಣ ಲೂಟಿ ಮಾಡಿದರು. ಆ ಹಣವನ್ನು ಖರ್ಚು ಮಾಡಲು ಇಲ್ಲಿಗೆ ಬಂದಿದ್ದಾರೆ. ಹಣ ಇದೆ ಎಂಬ ಒಂದೇ ಕಾರಣಕ್ಕೆ ಕರೆತಂದು ನಿಲ್ಲಿಸಿದ್ದಾರೆ. ಸೋಮಣ್ಣ ಕೆಲಸಗಾರ, ವೋಟು ಕೋಡಿ ಎಂದು ಹೇಳುತ್ತಿದ್ದಾರೆ. ಅವರು ವಸತಿ ಸಚಿವರಾಗಿದ್ದ ಸಮಯದಲ್ಲಿ ಬಡವರಿಗೆ ಹೊಸದಾಗಿ ಒಂದೇ ಒಂದು ಮನೆಯನ್ನು ಕಟ್ಟಿಸಿಕೊಟ್ಟಿದ್ದರೆ ದಾಖಲೆ ತೋರಿಸಲಿ. ಅಭಿವೃದ್ಧಿ ಕೆಲಸಗಳನ್ನೇ ಮಾಡಿಲ್ಲ. ಮಾಡಿದ್ದರೆ ಯಾವ ಕೆಲಸ ಮಾಡಿದ್ದಾರೆ ಎಂಬುದನ್ನು ಜನರ ಮುಂದಿಡಲಿ ಎಂದು ಸವಾಲು ಹಾಕಿದರು.
ಇದೇ ವೇಳೆ ಮೈಸೂರು ಭಾಗದ ಜನರು ಸೋಮಣ್ಣ ಅವರನ್ನು ಸೋಲಿಸಿ ಮನೆಗೆ ಕಳುಹಿಸಿದಂತೆ ತುಮಕೂರು ಜಿಲ್ಲೆಯ ಜನರು ಅಂತಹ ಕೆಲಸ ಮಾಡಬೇಕು.
