ಬೆಂಗಳೂರು : ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಮುಂಬರುವ ಚುನಾವಣೆಗಳಲ್ಲೂ ಮುಂದುವರಿಯುತ್ತದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಬಯಕೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ತಮ್ಮದು ಜನ್ಮ ಜನ್ಮದ ಮೈತ್ರಿ ಎಂಬುದನ್ನು ಸ್ಪಷ್ಟಪಡಿಸಿದರು. ಮುಂದಿನ ವಿಧಾನ ಸಭಾ ಚುನಾವಣೆಯಲ್ಲೂ ಈ ಮೈತ್ರಿ ಮುಂದುವರಿಯುತ್ತದೆ. ಬೇರೆ ಚುನಾವಣೆಗಳಲ್ಲೂ ಮೈತ್ರಿ ಇರುತ್ತದೆ ಎಂದು ಯಡಿಯೂರಪ್ಪ ಹೇಳಿದರು.
ಈ ಎರಡೂ ಪಕ್ಷ್ಜಗಳು ಒಂದಾಗಿ ರಾಜ್ಯದಲ್ಲಿ ಹೋರಾಟ ಮಾಡಬೇಕು. ಒಂದಾಗಿ ಚುನಾವಣೆಗಳನ್ನು ಎದುರಿಸಬೇಕು ಎಂಬುದು ರಾಜ್ಯದ ಜನರ ಆಶಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಪಕ್ಷದ ಮೇಲೆ ವಾಗ್ದಾಳಿ ನಡೆಸಿದ ಅವರು ಕಾಂಗ್ರೆಸ್ ತನ್ನ ಪ್ರಧಾನಿ ಅಭ್ಯರ್ಥಿ ಯಾರು ಎಂಬುದನ್ನು ಬಹಿರಂಗಪಡಿಸಲಿ ಎಂದು ಅವರು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷ ಡಾ. ಅಂಬೇಡ್ಕರ್ ಅವರಿಗೆ ಗೌರವ ನೀಡಲಿಲ್ಲ. ನಾವು ನೀಡಿದ್ದೇವೆ ಎಂದು ಅವರು ಹೇಳಿಕೊಂಡರು.







