ನಟ ದರ್ಶನ್ ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು, ಅದು ಅವರ ಸ್ವಾತಂತ್ರ್ಯ: ಕುಮಾರಸ್ವಾಮಿ

HD Kumaraswamy: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರ ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು. ದರ್ಶನ ಕೂಡ ತಮ್ಮ ಕರ್ತವ್ಯವನ್ನು ಮಾಡುತ್ತಿದ್ದಾರೆ

ಶಿವಮೊಗ್ಗ : ಚಾಲೆಂಜಿಂಗ್​​ ಸ್ಟಾರ್, ನಟ ದರ್ಶನ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಹೆಚ್ಚಿನ ಮಹತ್ವ ನೀಡಲು ಮಿತ್ರ ಪಕ್ಷಗಳ ಅಭ್ಯರ್ಥಿ ಹೆಚ್. ಡಿ. ಕುಮಾರಸ್ವಾಮಿ ನಿರಾಕರಿಸಿದ್ದಾರೆ.

ಅದು ಅವರ ಸ್ವಾತಂತ್ರ್ಯ. ಅವರು ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು . ಅದು ಅವರ ಸ್ವಾತಂತ್ರ್ಯ ಹಾಗೆ ಇದರಲ್ಲಿ ತಪ್ಪೇನು ಇಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರ ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು. ದರ್ಶನ ಕೂಡ ತಮ್ಮ ಕರ್ತವ್ಯವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ ಕೂಟ ಜಯಶಾಲಿಯಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

Author

error: