ಲೋಕಸಭಾ ಚುನಾವಣೆ 21 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಪ್ರಾರಂಭ, ಮತಗಟ್ಟೆಯತ್ತ ಮತದಾರರು

Lok Sabha Election 2024 Phase 1 Voting : ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ನವದೆಹಲಿ : ದೇಶದ ಜನತಂತ್ರದ ಉತ್ಸವ ಲೋಕಸಭಾ ಚುನಾವಣೆ. ಈ ಚುನಾವಣೆಯ ಮೊದಲ ಹಂತದ ಮತದಾನ ಪ್ರಾರಂಭವಾಗಿದೆ. ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ತಮಿಳುನಾಡಿನ ಎಲ್ಲಾ 39 ಸ್ಥಾನಗಳು, ಉತ್ತರಾಖಂಡದ ಎಲ್ಲಾ ಐದು ಸ್ಥಾನಗಳು, ಅರುಣಾಚಲ ಪ್ರದೇಶ, ಮಣಿಪುರ ಮತ್ತು ಮೇಘಾಲಯದ ಎರಡೂ ಸ್ಥಾನಗಳು ಮತ್ತು ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂನ ತಲಾ ಒಂದು ಸ್ಥಾನಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿದೆ.

ರಾಜಸ್ಥಾನದ 25 ರಲ್ಲಿ 12, ಉತ್ತರ ಪ್ರದೇಶದ 80 ರಲ್ಲಿ 8, ಮಧ್ಯಪ್ರದೇಶದ 29 ರಲ್ಲಿ 6, ಮಹಾರಾಷ್ಟ್ರದ 48 ರಲ್ಲಿ 5, ಅಸ್ಸಾಂನ 14 ರಲ್ಲಿ 5 ಮತ್ತು ಬಿಹಾರದ 40 ಸ್ಥಾನಗಳ ಪೈಕಿ 4 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅಲ್ಲದೇ ಪಶ್ಚಿಮ ಬಂಗಾಳದ 42 ಸ್ಥಾನಗಳ ಪೈಕಿ ಮೂರು, ಛತ್ತೀಸ್‌ಗಢದ 11 ಸ್ಥಾನಗಳಲ್ಲಿ ಒಂದು ಮತ್ತು ತ್ರಿಪುರಾದಲ್ಲಿ ಎರಡು ಸ್ಥಾನಗಳ ಪೈಕಿ ಒಂದಕ್ಕೆ ಚುನಾವಣೆ ನಡೆಯುತ್ತಿದೆ..

ಕೇಂದ್ರಾಡಳಿತ ಪ್ರದೇಶಗಳಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಐದರಲ್ಲಿ ಒಂದು ಸ್ಥಾನ, ಹಾಗೆಯೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿನ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಶುಕ್ರವಾರ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ 92 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. 543 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

102 ಲೋಕಸಭಾ ಸ್ಥಾನಗಳಲ್ಲಿ 2019 ರಲ್ಲಿ ಬಿಜೆಪಿ 39 ಸ್ಥಾನಗಳನ್ನು ಗೆದ್ದಿತ್ತು, ಆಡಳಿತಾರೂಢ ಮೈತ್ರಿಕೂಟದ ಎನ್‌ಡಿಎ ರಾಜಸ್ಥಾನ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ ಕ್ರಮವಾಗಿ 12, ಐದು ಮತ್ತು ಮೂರು ಸ್ಥಾನಗಳನ್ನು ಗಳಿಸಿತು. ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟವು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದಿತ್ತು.

Author

error: