IPL 2024 PBKS vs MI : ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ 9 ರನ್ ಗಳ ಜಯ..

IPL 2024 PBKS vs MI Highlights : 193 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಪಂಜಾಬ್ ಕಿಂಗ್ಸ್ 19.1 ಓವರ್ ಗಳಲ್ಲಿ 183 ರನ್ ಗಳಿಸಲಷ್ಟೇ ಶಕ್ತವಾಯಿತು.

ಮೊಹಾಲಿ : ಮುಲ್ಲಾನ್ ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 9 ರನ್ ಗಳಿಂದ ಪಂಜಾಬ್ ಕಿಂಗ್ಸ್ ನ್ನು ಸೋಲಿಸಿತು

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು. ಇಶಾನ್ ಕಿಶಾನ್ 8 ರನ್ ಗಳಿಸಿ ಬೇಗ ಔಟಾದರೆ, ರೋಹಿತ್ ಶರ್ಮಾ 36, ಸೂರ್ಯಕುಮಾರ್ ಯಾದವ್ 78, ತಿಲಕ್ ವರ್ಮಾ ಅಜೇಯ 34 ಹಾಗೂ ನಾಯಕ ಹಾರ್ದಿಕ್ ಪಾಂಡ್ಯ 10, ಥೀಮ್ ಡೇವಿಡ್ 14 ರನ್ ಗಳಿಸಿದರು.

ಮುಂಬೈ ಇಂಡಿಯನ್ಸ್ ನೀಡಿದ 193 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಪಂಜಾಬ್ ಕಿಂಗ್ಸ್ 19.1 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 183 ರನ್ ಗಳಿಸಲಷ್ಟೇ ಶಕ್ತವಾಯಿತು. ಪಂಜಾಬ್ ಪರ ಶಶಾಂಕ್ ಸಿಂಗ್ 41, ಅಶುತೋಷ್ ಶರ್ಮಾ, 61 ರನ್ ಗಳಿಸಿದ್ದು ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರು ರನ್ ಕದಿಯುವಲ್ಲಿ ವಿಫಲರಾದರು. ಇದರಿಂದ ಮುಂಬೈ ಇಂಡಿಯನ್ಸ್ 9 ರನ್ ಗಳಿಂದ ಗೆಲುವಿನ ನಗೆ ಬೀರಿತು.

Author

error: