ಚಿಕ್ಕಬಳ್ಳಾಪುರ : 2014ರಲ್ಲಿ ಕಾಂಗ್ರೆಸ್ ಪಕ್ಷ ಮೋದಿಯವರಿಗೆ ಖಾಲಿ ಚೊಂಬು ನೀಡಿತ್ತು. ಈಗ ಅವರು ಈ ಚೊಂಬನ್ನುಅಕ್ಷಯ ಪಾತ್ರೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ಜೊತೆ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಮೇಲೆ ವಾಗ್ದಾಳಿ ಮಾಡಿದರು. ರಾಹುಲ್ ಗಾಂಧಿ ಅವರನ್ನು ಟೀಕಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಸುಧೀರ್ಘವಾಗಿ ಎಳೆದು ಹೇಳಿ ವ್ಯಂಗ್ಯವಾಡಿದರು.
ಮೋದಿಯವರು ಪ್ರಧಾನಿಯಾದ ಮೇಲೆ ಸಮಾಜದ ಬಡವರು ದಲಿತರು ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಕೆಲಸ ಮಾಡಿದ್ದಾರೆ ಎಂದು ದೇವೇಗೌಡ ಶ್ಲಾಘಿಸಿದರು.
ಈಗ ನಾವು ಕರ್ನಾಟಕದ ಎಲ್ಲ 28 ಕ್ಷೇತ್ರಗಳನ್ನು ಗೆದ್ದು ಮೋದಿಯವರಿಗೆ ಅರ್ಪಿಸಬೇಕಾಗಿದೆ ಎಂದು ಅವರು ಹೇಳಿದರು.
ಏರಿದ ಧ್ವನಿಯಲ್ಲಿ ಮಾತನಾಡಿದ ದೇವೇಗೌಡರು ಒಂದು ಹಂತದಲ್ಲಿ ಪ್ರಧಾನಿ ಮೋದಿಯವರ ಕೈ ಹಿಡಿದು ಮೇಲಕ್ಕೆ ಎತ್ತಿದರು.
