ಬೆಂಗಳೂರು : ಈ ಬಾರಿ ಅವರ ಅಂತ್ಯ ಆಗಲೇಬೇಕು. ಅದಕ್ಕಾಗಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಆಯ್ಕೆ ಮಾಡಿದ ಡಾ. ಮಂಜುನಾಥ್ ಅವರನ್ನು ಗೆಲ್ಲಿಸಲೇಬೇಕು ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕರೆ ನೀಡಿದ್ದಾರೆ.

ಅವರು ಮರಳವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಅವರ ಪರವಾಗಿ ಚುನಾವಣಾ ಭಾಷಣ ಮಾಡುತ್ತಿದ್ದರು. ಅವರ ಅಂತ್ಯ ಎಂದರೆ ಯಾರ ಅಂತ್ಯ ? ಎಂಬುದನ್ನು ಅವರು ಹೇಳಲಿಲ್ಲ. ನಾನು ಅವರ ಹೆಸರನ್ನೂ ಹೇಳುವುದಿಲ್ಲ ಎಂದು ಹೇಳಿದ ಗೌಡರು ಡಿ.ಕೆ. ಶಿವಕುಮಾರ್ ಮತ್ತು ಡಿ. ಕೆ. ಸುರೇಶ್ ಅವರನ್ನು ಉದ್ದೇಶಿಸಿ ಈ ಮಾತು ಹೇಳಿದ್ದು ಸ್ಪಷ್ಟವಿತ್ತು.

ಡಾ.ಮಂಜುನಾಥ್ ಅವರು 8 ಲಕ್ಷ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಅವರನ್ನು ರಾಷ್ಟ್ರ ಮಟ್ಟದಲ್ಲಿ ಬಳಸಿಕೊಳ್ಳುವುದಾಗಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ ಎಂದು ಹೇಳಿದ ಗೌಡರು, ಡಾ. ಮಂಜುನಾಥ್ ಕೇಂದ್ರದಲ್ಲಿ ಮಂತ್ರಿಯಾಗುತ್ತಾರೆ ಎಂದರು.

ಕುಮಾರಸ್ವಾಮಿ ಅವರು ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಮಾಡಿದ್ದಾರೆ. 25 ಸಾವಿರ ಕೋಟಿ ರೂಪಾಯಿ ರೈತರ ಸಾಲ ಮನ್ನಾ ಮಾಡಿದೆ ದೇಶದ ಏಕಮೇವ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ತಮ್ಮ ಮಗನನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.

Author

Leave a Reply

Your email address will not be published. Required fields are marked *