ಹಾಸನ ಜಿಲ್ಲೆಯಾದ್ಯಂತ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ವೀಡಿಯೋ ಕುರಿತ ತನಿಖೆಗೆ ವಿಶೇಶ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ..

ಕಳೆದ ಕೆಲವು ವಾರಗಳಿಂದ ಈ ವೀಡಿಯೋ ಜಿಲ್ಲೆಯಾದ್ಯಂತ ಸದ್ದು ಮಾಡಿತ್ತು. ಮಾನವಂತರು ನೋಡಲು ಸಾಧ್ಯವಿಲ್ಲದ ಈ ವೀಡೀಯೋ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆದಿತ್ತು. ಈ ವೀಡಿಯೋದಲ್ಲಿ ಇರುವವರು ಸಂಸದ ಪ್ರಜ್ವಲ್ ರೇವಣ್ಣ ಎಂಬ ಆರೋಪವೂ ಕೇಳಿ ಬಂದಿತ್ತು.
ಈಗ ಅವರ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ವೀಡಿಯೋ ಕುರಿತ ತನಿಖೆಗೆ ವಿಶೇಶ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಟ್ವಿಟರ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ, ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ದೌರ್ಜನ್ಯ ನಡೆಸಿರುವ ವಿಡಿಯೊ ದೃಶ್ಯಾವಳಿಗಳ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು.

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಗುರುವಾರ ಪತ್ರ ಬರೆದು, ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸುವಂತೆ ಶಿಫಾರಸು ಮಾಡಿದ್ದರು.

ಈ ಮಧ್ಯೆ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಬಂದಿದೆ

Author

Leave a Reply

Your email address will not be published. Required fields are marked *