ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಬೆಳಗಾವಿಗೆ ಬಂದು ಇಳಿದರು. ಇಂದು ಹಲವಾರು ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಪಾಲ್ಗೊಳ್ಳುವರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದು ಇಳಿದ ಪ್ರಧಾನಿ ಅವರನ್ನು ಬೆಳಗಾವಿಯ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಸ್ವಾಗತಿಸಿದರು.
ರಾತ್ರಿ ಬೆಳಗಾವಿಯಲ್ಲೇ ತಂಗಿದ್ದ ಮೋದಿ ಇಂದು ಹಲವಾರು ಸಭೆಗಳಲ್ಲಿ ಪಾಲ್ಗೊಳ್ಳುವರು.
ನಿನ್ನೆ ರಾತ್ರಿ ಉತ್ತರ ಕರ್ನಾಟಕದ ಜೋಳದ ರೊಟ್ಟಿ ಊಟದ ವ್ಯವಸ್ಥೆ ಮಾಡಲಾಗಿತ್ತು.
ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಪರ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಪರ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ.
