ತಮ್ಮ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ , ಶಾಸಕ ಎಚ್.ಡಿ. ರೇವಣ್ಣ ಅವರು, ಇಂಥ ಆರೋಪಗಳು ದೇವೇಗೌಡರ ಕುಟುಂಬಕ್ಕೆ ಹೊಸದಲ್ಲ. ಇದೆಲ್ಲಾ ರಾಜಕೀಯ ಪ್ರೇರಿತ ಎಂದು ಸೋಮವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರ ಅವರದ್ದೇ ತನಿಖೆ ಮಾಡಲಿ. ಕಾನೂನಿನ ಪ್ರಕಾರ ಏನಿದೆಯೋ ಹಾಗೆ ಆಗಲಿ ಎಂದರು.

ಇದೇ ವೇಳೆ ತಮ್ಮ ಮಗ ಪ್ರಜ್ವಲ್ ನಾಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ರೇವಣ್ಣ, ತಾವೆಲ್ಲೂ ಓಡಿ ಹೋಗಿಲ್ಲ. ಆತ ವಿಚಾರಣೆಗೆ ಕರೆದರೆ ಬರುತ್ತಾನೆ ಎಂದಿದ್ದಾರೆ.

. ಪ್ರಜ್ವಲ್ ವಿದೇಶಕ್ಕೆ ಹೋಗಬೇಕಿತ್ತು ಅದು ಮೊದಲೇ ನಿರ್ಧಾರವಾಗಿತ್ತು, ಹೋಗಿದಾನೆ. . ತನಿಖೆಗೆ ಕರೆದಾಗ ಪ್ರಜ್ವಲ್ ಬರ್ತಾನೆ ಎಂದು ಎಚ್.ಡಿ. ರೇವಣ್ಣ ಹೇಳಿದರು

ಎಚ್ ಡಿ ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯದ ಆರೋಪಗಳಿವೆ. ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಅಪ್ಪ ಮತ್ತು ಮಗ ಪ್ರಮುಖ ಆರೋಪಿಗಳಾಗಿದ್ದಾರೆ.

Author

Leave a Reply

Your email address will not be published. Required fields are marked *