ಸೋಮವಾರ ಮುಂಜಾನೆ ನಿಧನರಾದ ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ವಿ ಶ್ರೀನಿವಾಸ ಪ್ರಸಾದ್ ಅವರ ಗೌರವಾರ್ಥ ಕರ್ನಾಟಕ ಸರ್ಕಾರ ಮಂಗಳವಾರ ರಾಜ್ಯದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಿಸಿದ

ಸಂಸದ ವಿ ಶ್ರೀನಿವಾಸ ಪ್ರಸಾದ್ ಗೌರವಾರ್ಥ ಮಂಗಳವಾರ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಎಲ್ಲ ಸರ್ಕಾರಿ ಕಚೇರಿಗಳು, ಎಲ್ಲ ಶಾಲಾ–ಕಾಲೇಜುಗಳಿಗೂ ಮತ್ತು ಅನುದಾನ ಪಡೆಯುವ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ
ಸಿಎಂ ಸಿದ್ದರಾಮಯ್ಯ ಅವರು ಶ್ರೀನಿವಾಸ ಪ್ರಸಾದ್ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ’15 ದಿನಗಳ ಹಿಂದೆ ನಾವು ಭೇಟಿಯಾದಾಗ ರಾಜಕೀಯದ ಬಗ್ಗೆ ಮಾತನಾಡಿದ್ದೆವು. ‘ ಎಂದು ಹೇಳಿದರು.

ಪ್ರಸಾದ್ ಅವರ ನೆನಪು ಮಾಡಿಕೊಂಡ ಸಿದ್ದರಾಮಯ್ಯ ಅವರು ನನ್ನೊಂದಿಗೆ ರಾಜಕೀಯ ಮಾಡಿ ಸಂಪುಟದಲ್ಲಿ ಸಚಿವರಾಗಿದ್ದರು, ಜನತಾ ಪಕ್ಷ ಮತ್ತು ಕಾಂಗ್ರೆಸ್ ಎರಡರಲ್ಲೂ ನನ್ನ ಜೊತೆಗಿದ್ದ ಒಬ್ಬರನ್ನು ಕಳೆದುಕೊಂಡಿರುವುದು ತುಂಬಾ ಬೇಸರ ತಂದಿದೆ. ಶ್ರೀನಿವಾಸ ಪ್ರಸಾದ್ ಅವರು ನೇರ ಮಾತಿಗೆ ಹೆಸರುವಾಸಿ ಮತ್ತು ಸಾಮಾಜಿಕ ಅಸಮಾನತೆಗಳ ವಿರುದ್ಧ ಹೋರಾಡಿದರು ಎಂದರು.

Author

Leave a Reply

Your email address will not be published. Required fields are marked *