ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಜೆಡಿಎಸ್- ಬಿಜೆಪಿ ಮೈತ್ರಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಮೂಲಕ ಪಕ್ಷದ ನಾಯಕರೊಬ್ಬರು ಮಾಡುವ ತಪ್ಪು ಮತ್ತು ಅನೈತಿಕ ಚಟುವಟಿಕೆಗಳಿಗೂ ಪಕ್ಷಕ್ಕೂ ಸಂಬಂಧ ಇಲ್ಲ ಎನ್ನುವ ರೀತಿ ಅವರು ಮಾತನಾಡಿದ್ದಾರೆ. ಅಂದರೆ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಆರೋಪಗಳಿಗೂ ಜೆಡಿಎಸ್ ಪಕ್ಷಕ್ಕೂ ಸಂಬಂಧ ಇಲ್ಲ, ಸಂಬಂಧ ಇದ್ದರೂ ನಮ್ಮ ಮೈತ್ರಿಗೆ ತೊಂದರೆ ಇಲ್ಲ ಎಂಬ ಅರ್ಥದಲ್ಲಿ ಅವರು ಮಾತನಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿ ಅವರು, ಪ್ರಜ್ವಲ್ ರೇವಣ್ಣ ವೈಯಕ್ತಿಕವಾಗಿ ತಪ್ಪು ಮಾಡಿದ್ದರೆ ಅದಕ್ಕೆ ಸರ್ಕಾರ, ಕಾನೂನು ಕ್ರಮ ಕೈಗೊಳ್ಳಲಿ ಎಂದು ಅವರು ಹೇಳಿದ್ದಾರೆ.. ವೈಯಕ್ತಿಕವಾಗಿ ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕ್ರಮವಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇದೆ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಲಿ ಎಂದು ಹೇಳಿದರು.
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ವಿಚಾರದಲ್ಲಿ ಈಗಾಗಲೇ ಈ ಪ್ರಕರಣವನ್ನ ಎಸ್ ಐಟಿ ಗೆ ವಹಿಸಲಾಗಿದೆ, ಇಂದು ನಡೆಯುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ್ವರನ್ನು ಜೆಡಿಎಸ್ ನಿಂದ ಉಚ್ಛಾಟನೆ ಮಾಡುವ ಸಾಧ್ಯತೆಯಿದೆ.
