: ಧರ್ಮಾಧಾರಿತ ಮೀಸಲಾತಿ ವಿಚಾರವನ್ನು ಸಂವಿಧಾನದ ಪ್ರಕಾರ ಮಾಡಲಾಗದಿದ್ದರೂ ಕಾಂಗ್ರೆಸ್ ಬೆಂಬಲಿಸುತ್ತಿದೆ . ಅದು ಕೆಟ್ಟ ಮತ್ತು ವಿಭಜಕ ಗುಣ ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಂಗಳವಾರ ಆರೋಪಿಸಿದರು.

ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರ ಬಿಜೆಪಿ ಪ್ರಚಾರದ ಅಂಗವಾಗಿ ಆಯೋಜಿಸಿದ್ದ ವೃತ್ತಿಪರರ ಸಮಾವೇಶದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ, ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಯಾವುದೇ ಸ್ಥಾನವಿಲ್ಲ ಎಂದು ಸ್ಪಷ್ಟವಾಗಿ ಬರೆಯಲಾಗಿದೆ, ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಏನು ಮಾಡಿದರು. ಒಬಿಸಿ ಕೋಟಾದಿಂದ ಮುಸ್ಲಿಂರಿಗೆ ಶೇ.4 ರಷ್ಟು ಮೀಸಲಾತಿ ಕೊಟ್ಟರು. ಒಬಿಸಿ ವಿರೋಧಿಗಳು ಯಾರು? ಅವರು ಮುಸ್ಲಿಂ ಸಹೋದರರ ಸ್ನೇಹಿತರಲ್ಲ ಅಥವಾ ಒಬಿಸಿ ಬಗ್ಗೆ ಸಹಾನುಭೂತಿ ಹೊಂದಿರುವವರಲ್ಲ” ಎಂದು ಹೇಳಿದರು.

ಅವಿಭಜಿತ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ನಾಲ್ಕು ಬಾರಿ ಕಾನೂನು ತಂದು, ಎಸ್‌ಸಿ / ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಲು ಪ್ರಯತ್ನಿಸಿತು ಎಂದು ಮೋಡಿಯವರಂತೆ ದೂರಿದರು.
“ನಾವು ಮುಸ್ಲಿಂ ಸಮುದಾಯದ ವಿರುದ್ಧ ಅಲ್ಲ, ಆದರೆ ಸಂವಿಧಾನವು ಧರ್ಮದ ಆಧಾರದ ಮೇಲೆ ಮೀಸಲಾತಿ ಇರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ ಮತ್ತು ಇದು ಬಹಳ ಆಳವಾದ ಚಿಂತನೆಯಾಗಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ಆದರೆ, ಕಾಂಗ್ರೆಸ್ ನವರು ಕೆಟ್ಟ ವಿಭಜಕ ಗುಣ ಹೊಂದಿರುವವರು, ನಾವು ಅವರಿಗೆ ಬೆಂಬಲ ನೀಡಲಿದ್ದೇವೆಯೇ?” ಎಂದು ಹೇಳಿದರು. ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ, ರಾಘವೇಂದ್ರ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *