ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ದೇಶಾದ್ಯಂತ ಸಂಚಲನವನ್ನು ಮೂಡಿಸುತ್ತಿದೆ. ಎಲ್ಲೆಡೆ ಇದೇ ಚರ್ಚೆ ಪ್ರತಿಕ್ರಿಯೆ. ಈ ನಡುವೆ ಬಿಜೆಪಿ ವಿರೋಧಿ ಪಕ್ಷಗಳು ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡುತ್ತಿವೆ.
ಬಿಹಾರದ ಆರ್ ಜೆ ಡಿ ನಾಯಕ ತೇಜಸ್ವಿ ಯಾದವ್ ಈ ಪ್ರಕರಣವನ್ನು ಪ್ರಸ್ತಾಪಿಸಿ ಬಿಜೆಪಿ ಅತ್ಯಾಚಾರಿಗಳನ್ನು ಸದಾ ರಕ್ಷಿಸುತ್ತ ಬಂದಿದೆ. ಅವರಿಗೆ ಪರಾರಿಯಾಗಲು ಅವಕಾಶ ಕಲ್ಪಿಸಿದೆ ಎಂದು ದೂರಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಯಾಕೆ ಈ ಪ್ರಕರಣದ ಬಗ್ಗೆ ಯಾಕೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.
ಈಂತಹ ಲೈಂಗಿಕ ಅತ್ಯಾಚಾರ ನಡೆಸಿದ ವ್ಯಕ್ತಿಯ ಜೊತೆ ಪ್ರಧಾನಿ ವೇದಿಕೆ ಹಂಚಿಕೊಂಡಿದ್ದರು.ಅವರಿಗೆ ಮತ ನೀಡುವಂತೆಯೂ ಮನವಿ ಮಾಡಿದ್ದರು ಎಂಬುದನ್ನು ಅವರು ನೆನಪಿಸಿದರು.

Author

Leave a Reply

Your email address will not be published. Required fields are marked *