ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ಪರಿಸ್ಥಿತಿ ಮೇ ೫ ರ ವರೆಗೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದ ೨೫ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಬಹುದು ಎಂದೂ ಇಲಾಖೆ ಎಚ್ಚರಿಕೆ ನೀಡಿದೆ.
ಬಿಸಿ ಗಾಳಿ ಮತ್ತು ಶಾಖಾಘಾತದಿಂದ ಈ ಕೆಳಗಿನ ಜಿಲ್ಲೆಗಳು ತೊಂದರೆ ಅನುಭವಿಸಬಹುದು.
ಬೀದರ್, ಕಲ್ಬುರ್ಗಿ, ವಿಜಯಪುರ,ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ,ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರಮ್ ದಾವನಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ದಟ್ಟವಾಗಿದೆ.
ಚಿಕ್ಕಮಗಳೂರು, ಕೊಡಗು, ಮೈಸೂರು ಮಂಡ್ಯ ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲಎಡೆ ಬುಧವಾರ ಮಳೆಯಾಗುವ ಸಾಧ್ಯತೆ ಇದೆ
ಮೇ ೪ ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.







