ರಾಹುಲ್, ಪ್ರಿಯಾಂಕಾ ಮನವೊಲಿಕೆಗೆ ಯತ್ನ ?
ಈ ಬಾರಿ ರಾಹುಲ್ ಗೆ ಗೆಲ್ಲುವ ಅವಕಾಶ

ಉತ್ತರ ಪ್ರದೇಶದ ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನಉ ಇನ್ನೂ ನಿಗೂಢವಾಗಿ ಇಡಲಾಗಿದೆ. ಈ ನಡುವೆ ನೆಅಹ್ರೂ ಕುಟುಂಬದವರೇ ಈ ಕ್ಷೇತ್ರಗಳಿಂದ ಸ್ಪರ್ಧಿಸುತ್ತಾರೆ ಎಂಬ ಮಾತೂ ಕೇಳಿ ಬರುತ್ತಿದೆ.
ನೆಹರೂ ಕುಟುಂಬದ ಪರಂಪರಾಗತ ಕ್ಷೇತ್ರಗಳೆಂದೇ ಈ ಎರಡು ಕ್ಷೇತ್ರಗಳನ್ನು ಗುರುತಿಸಲಾಗುತ್ತದೆ.
ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಕಳೆದ ಚುನಾವಣೆ ಸಂದರ್ಭದಲ್ಲಿ ದಕ್ಷಿಣಕ್ಕೆ ವಲಸೆ ಬಂದಿದ್ದರು. ದಕ್ಷಿಣದ ಜನ ಅವರನ್ನು ಲೋಕಸಭೆಗೆ ಕಳುಹಿಸಿಕೊಟ್ಟಿದ್ದರು. ಈ ಬಾರಿಯೂ ಅವರು ಕೇರಳದ ವಯನಾಡಿನಿಂದ ಸ್ಪರ್ಧಿಸುತ್ತಿದ್ದಾರೆ.
ಈ ನಡುವೆ ಅಮೇಥಿಯಿಂದ ಸ್ಪರ್ಧಿಸಬೇಕು ಎಂಬ ಒತ್ತಡವೂ ಹೆಚ್ಚುತ್ತಿದೆ. ಆದರೆ ರಾಹುಲ್ ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಶ್ರೀಮತಿ ಪ್ರಿಯಾಂಕಾ ಗಾಂಧಿ ಕೂಡ ಚುನಾವಣೆಗೆ ಸ್ಪರ್ಧಿಸಲು ಸಿದ್ದರಿಲ್ಲ. ಈ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಇನ್ನು ಮೂರು ದಿನ ಬಾಕಿ ಇದೆ. ಅಷ್ಟರಲ್ಲಿ ಕಾಂಗ್ರೆಸ್ ಅಂತಿಮ ತೀರ್ಮಾನ ಕೈಗೊಳ್ಳಬಹುದು.

Author

Leave a Reply

Your email address will not be published. Required fields are marked *