ಹೆಚ್ ಡಿ ರೇವಣ್ಣಗೆ ಬಂಧನ ಭೀತಿ : ನಿರೀಕ್ಷಣಾ ಜಾಮೀನು ಕೋರಿ ಅರ್ಜಿ

H D Revanna : ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್​ಗೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ರೇವಣ್ಣ ಕೋರ್ಟ್​ ಮೆಟ್ಟಿಲೇರಿರುವುದು ಕುತೂಹಲ ಮೂಡಿಸಿದೆ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಶಾಸಕ ಹೆಚ್​ ಡಿ ರೇವಣ್ಣ ಬಂಧನದ ಭೀತಿಯಲ್ಲಿದ್ದಾರೆ. ಈ ಭಯದಲ್ಲಿ ಗುರುವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಎಸ್​ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದೆ, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್​ಗೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ರೇವಣ್ಣ ಕೋರ್ಟ್​ ಮೆಟ್ಟಿಲೇರಿರುವುದು ಕುತೂಹಲ ಮೂಡಿಸಿದೆ.

ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಲವು ವಿಡಿಯೋಗಳು ಬಹಿರಂಗವಾದ ನಂತರ ಹಾಸನ ಸಂಸದರ ವಿರುದ್ಧದ ಆರೋಪಗಳ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಭಾನುವಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ ಮತ್ತು ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಎಸ್‌ಐಟಿಗೆ ಸೂಚಿಸಲಾಗಿದೆ.

Author

error: