ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ ಬಿಜೆಪಿಗೆ ತೀವ್ರ ಮುಜುಗರ – ಲಿಂಬಾವಳಿ
ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದಿಂದಾಗಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಮುಖಭಂಗವಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕ ಮಾಜಿ ಸಚಿವ ಅರವಿಂದ ಲಿಂಬಾವಳಿ ಬಹಿರಂಗವಾಗಿ ಹೇಳಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅರವಿಂದ್ ನಿಂಬಾವಳಿ , ಈ ವಿಷಯ ಖಂಡಿತವಾಗಿಯೂ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ ಎಂಬುದನ್ನು ನಾವು ಒಪ್ಪಿಕೊಂಡಿದ್ದೇವೆ. ಆದರೆ ಬಿಜೆಪಿ ಆರೋಪಿಯನ್ನು ಬೆಂಬಲಿಸುವುದಿಲ್ಲ ಅಥವಾ ಅವರ ಜೊತೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಇನ್ನು ಕಾನೂನಿನ ಪ್ರಕಾರ ಕಠಿಣ ಕ್ರಮಕ್ಕೆ ಆಗ್ರಹಿಸುತ್ತೇವೆ. ತನಿಖೆಯಲ್ಲಿ ಪಕ್ಷ ಯಾವುದೇ ಅಡೆತಡೆ ಸೃಷ್ಟಿಸುವುದಿಲ್ಲ ಎಂದರು.
ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಲಿಂಬಾವಳಿ ಆರೋಪಿಸಿದರು. ಆದರೆ ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾದ ಘಟನೆಯ ನಂತರ ಬಿಜೆಪಿ ಜೆಡಿಎಸ್ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳಲು ಹೊರಟಿದೆಯೇ ಎಂಬ ಪ್ರಶ್ನೆಗೆ ಲಿಂಬಾವಳಿ ಉತ್ತರಿಸಲು ನಿರಾಕರಿಸಿದರು.
