ರಾಜ್ಯದಲ್ಲಿ ನಾಳೆ 2ನೇ  ಹಂತದ ಮತದಾನ : 227 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Lokasabha Election Second Phase Voting : ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. 14 ಕ್ಷೇತ್ರಗಳಲ್ಲಿ ಹಕ್ಕು ಚಲಾವಣೆ ನಡೆಯಲಿದೆ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. 14 ಕ್ಷೇತ್ರಗಳಲ್ಲಿ ಹಕ್ಕು ಚಲಾವಣೆ ನಡೆಯಲಿದೆ. ಭಾರತದಲ್ಲಿ ಇದು ಮೂರನೇ ಹಂತದ ಮತದಾನವಾಗಿದ್ದು, 11 ರಾಜ್ಯಗಳ 92 ಸ್ಥಾನಗಳಿಗೆ ಮತದಾನ ನಡೆಯಲಿದೆ

ರಾಜ್ಯದ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ‌ಚಿಕ್ಕೋಡಿ, ದಾವಣಗೆರೆ, ಧಾರವಾಡ, ಹಾವೇರಿ, ಕೊಪ್ಪಳ, ಗುಲ್ಬರ್ಗ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6ರ ವರೆಗೆ ನಡೆಯಲಿದೆ.  

ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಮಾಜಿ ಸಿಎಂ ಗಳಾದ ಜಗದೀಶ ಶೆಟ್ಟರ್‌, ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಮಕ್ಕಳಾದ ಬಿ ವೈ ರಾಘವೇಂದ್ರ ಹಾಗೂ ಗೀತಾ ಶಿವರಾಜ್​​ ಕುಮಾರ್​ ಸೇರಿದಂತೆ ಸಚಿವರ ಮಕ್ಕಳು, ಸಂಬಂಧಿಕರು, ಹಾಲಿ ಸಂಸದರು ಕಣದಲ್ಲಿದ್ದಾರೆ.

Author

error: