ಬೆಂಗಳೂರು : ಬೇಸಿಗೆಗೆ ತೆರೆ ಬಿದಿದ್ದು..ಮಳೆರಾಯನ ಆಗಮನದ ಜೊತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ. ಮೈಸೂರು, ಚಾಮರಾಜನಗರ ಮಂಡ್ಯ ಜಿಲ್ಲೆಗಳಲ್ಲಿ ಭಾರಿ ವೇಗದಲ್ಲಿ ಗಾಳಿ ಬೀಸಬಹುದು. ಹಾಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆ ಬೀಳಲಿದೆ.
ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಳೆ, ಬಿರುಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
