Karnataka SSLC Results 2024 : ನಾಳೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

Karnataka SSLC Results 2024 : ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ನಾಳೆ ಗುರುವಾರ (ಮೇ.9) ರಂದು ಪ್ರಕಟಗೊಳ್ಳಲಿದೆ KSEAB ಪ್ರಕಟಣೆಯಲ್ಲಿ ತಿಳಿಸಿದೆ

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ನಾಳೆ ಗುರುವಾರ (ಮೇ.9) ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೇ.9ರ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ಬಳಿಕ www.karresults.nic.in ವೆಬ್‌ಸೈಟ್‌ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಮಾ. 25 ರಿಂದ ಏ.6ರ ವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಇದ್ದರು.

Author

error: