ಹೈದರಾಬಾದ್‌ : ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 9.4 ಓವರ್​ಗಳಲ್ಲೇ ಗೆಲೌವನ್ನು ತನ್ನಾಗಿಸಿದಿಕೊಂಡಿದೆ.

ಹೈದರಾಬಾದ್ ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು 165 ರನ್ ಮಾತ್ರ ಗಳಸಲು ಸಾಧ್ಯವಾಯಿತು. ಇದು ಗೆಲುವಿಗೆ ಸಾಕಾಗಲಿಲ್ಲ.

ಗೆಲುವಿಗೆ 166 ರನ್ ಗಳ ಗುರಿ ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್​ ಗೆ, ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಅವರು ಬಿರುಸಿನ ಆರಂಭ ನೀಡಿದರು. ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ ಅಜೇಯ 89 ರನ್ ಗಳಿಸಿದರೆ, ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ ಅಜೇಯ 75 ರನ್ ಗಳಿಸಿದರು. ಇಬ್ಬರೂ 166 ರನ್‌ಗಳ ಶತಕದ ಜೊತೆಯಾಟವಾಡಿದರು. ಇವರಿಬ್ಬರು 16 ಬೌಂಡರಿ ಹಾಗೂ 14 ಸಿಕ್ಸರ್‌ಗಳನ್ನು ಬಾರಿಸಿದರು.

ಲಕ್ನೋ ಬೌಲರ್‌ಗಳಿಗೆ ಒಂದೇ ಒಂದು ವಿಕೆಟ್ ಕೂಡ ಕಬಳಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಹೈದರಾಬಾದ್ ತಂಡ 10 ವಿಕೆಟ್‌ಗಳಿಂದ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಹೈದರಾಬಾದ್ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಏರಿದೆ ಮತ್ತು ಪ್ಲೇ ಆಫ್ ಸ್ಥಾನದ ಅವಕಾಶವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ.

Author

Leave a Reply

Your email address will not be published. Required fields are marked *