ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಹಗರಣ ದೇವೇಗೌಡರ ಕುಟುಂಬ ಮತ್ತು ಜೆಡಿಎಸ್ ಪಕ್ಷದಲ್ಲಿ ಬಿರುಕು ಮೂಡಿಸಿದೆ. ಈಗ ಜೈಲಿನಲ್ಲಿರುವ ಹೆಚ್. ಡಿ. ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕು ಎಂದು ಒತ್ತಡ ಪಕ್ಷದಲ್ಲಿ ಕೇಳಿ ಬರುತ್ತಿದೆ ಇದರಿಂದಾಗಿ ಹೆಚ್. ಡಿ. ಕುಮಾರಸ್ವಾಮಿ ಇಕ್ಕಟ್ಟಿನಲ್ಲಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರಿಗೆ ಎಚ್. ಡಿ. ರೇವಣ್ಣ ಅವರ ಬಗ್ಗೆ ವಿಶೇಷ ಪ್ರೀತಿ. ಪ್ರಜ್ವಲ್ ಬಗ್ಗೆ ಮೋಹ ಈ ಸ್ಥಿತಿಯಲ್ಲಿ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವ ತೀರ್ಮಾನ ತೆಗೆದುಕೊಳ್ಳುವುದು ಸುಲಭ ಅಲ್ಲ.

ಈ ನಡುವೆ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ.

ಹೆಚ್.ಡಿ.ರೇವಣ್ಣ ಅವರನ್ನು ಅಮಾನತು ಮಾಡಬೇಕೆಂದು ಪಕ್ಷದ ಮುಖಂಡರು ಒತ್ತಾಯಿಸುತ್ತಿದ್ದಾರೆ. ಇದೀಗ ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ಹಾಗೂ ಅವರನ್ನು ಎಸ್‌ಐಟಿ ತಂಡ ಬಂಧಿಸಿ ಜೈಲು ಪಾಲಾಗಿರುವುದು ಪಕ್ಷದ ಕಾರ್ಯಕರ್ತರು ಮುಜುಗರ ಎದುರಿಸುವಂತಾಗಿದೆ. ಪಕ್ಷದ ಬಗ್ಗೆ ನಾಯಕರಿಗೆ ಗಟ್ಚಿಯಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಎಸ್ ಐಟಿ ಕಸ್ಟಡಿಯಲ್ಲಿದ್ದ ಹೆಚ್ ಡಿ ರೇವಣ್ಣ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು ಕೈದಿ ನಂಬರ್ 4567 ಆಗಿದ್ದಾರೆ.

ಇಂದು ಜಾಮೀನು ಭವಿಷ್ಯ ನಿರ್ಧಾರ: ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೇವಣ್ಣ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಒಂದು ವೇಳೆ ಜಾಮೀನು ಸಿಗದ್ದಿದ್ದರೆ ಮೇ 14ರವರೆಗೆ ರೇವಣ್ಣ ಜೈಲಿನಲ್ಲೇ ಇರಬೇಕಾಗುತ್ತದೆ.

Author

Leave a Reply

Your email address will not be published. Required fields are marked *