ದೇಶದ ಸರ್ವೋಚ್ಚ ನ್ಯಾಯಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಇದು ಐತಿಹಾಸಿಕ ತೀರ್ಪು.
ಈ ತೀರ್ಪಿನಿಂದಾಗಿ ಅರವಿಂದ ಕೇಜ್ರೀವಾಲ್ ಮುಂದಿನ ೨೦ ದಿನ ಚುನಾವಣಾ ಪ್ರಚಾರ ಕಾರ್ಯ ಮಾಡಬಹುದು. ಅದರೆ ಅಬ್ಕಾರಿ ನೀತಿ ಕುರಿತ ಪ್ರಕರಣದ ಬಗ್ಗೆ ಮಾತನಾಡುವಂತಿಲ್ಲ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಜಾಮೀನು ದೊರಕಿತು. ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶವನ್ನು ನೀ್ಡಿತು.
ಈ ತೀರ್ಪು ಇಡಿಗೆ ಬಹುದೊಡ್ಡ ಹಿನ್ನಡೆಯಾಗಿದೆ. ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದು ಮೂಲಭೂತ ಹಕ್ಕಲ್ಲ ಎಂದು ಜಾರಿ ನಿರ್ದೇಶನಾಲಯ ವಾದಿಸಿತ್ತು. ಈ ವಾದಕ್ಕೆ ನ್ಯಾಯಾಲಯ ಪುರಸ್ಕಾರ ನೀಡಿಲ್ಲ.
ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ಜಾಮೀನಿಂದ ಆಮ್ ಆದ್ಮಿ ಪಕ್ಷ ಹಾಗೂ ದಿಲ್ಲಿ ಸರ್ಕಾರಕ್ಕೆ ಜಯ ದೊರಕಿದಂತಾಗಿದೆ. . ಆದರೆ ಅರವಿಂದ್ ಕೇಜ್ರಿವಾಲ್ ಅವರು ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ. ಮುಂದಿನ 20 ದಿನ ಅವರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಬಹುದಾಗಿದೆ.
ಜೂನ್ 1ರಂದು ಲೋಕಸಭೆ ಚುನಾವಣೆಯ ಕೊನೆಯ ಹಾಗೂ ಏಳನೇ ಹಂತದ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೂ ಕೇಜ್ರಿವಾಲ್ ಅವರು ಚುನಾವಣೆಗೆ ಸಂಬಂಧಿಸಿದ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು. ಜೂನ್ 2ರಂದು ಅವರು ಜೈಲಿನ ಅಧಿಕಾರಿಗಳ ಮುಂದೆ ಶರಣಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.
ಅಂತೆಯೇ ಮಾರ್ಚ್ 21ರಂದು ಬಂಧನಕ್ಕೆ ಒಳಗಾದ ಬಳಿಕ ಜಾರಿ ನಿರ್ದೇಶನಾಲಯದ ಲಾಕಪ್ ಹಾಗೂ ತಿಹಾರ್ ಜೈಲಿನಲ್ಲಿ ಸುಮಾರು 50 ದಿನಗಳನ್ನು ಕಳೆದಿದ್ದರು.
